ದೇಶಪ್ರಮುಖ ಸುದ್ದಿಮನರಂಜನೆ

ವಿಶ್ವಸಂಸ್ಥೆಯ ಗೌರವಕ್ಕೆ ಪಾತ್ರರಾದ ನಟ ಸೋನು ಸೂದ್

ನವದೆಹಲಿ,ಸೆ.29-ಬಾಲಿವುಡ್ ನಟ ಸೋನು ಸೂದ್ ವಿಶ್ವಸಂಸ್ಥೆಯ ಗೌರವಕ್ಕೆ ಪಾತ್ರರಾಗಿದ್ದಾರೆ. ವಿಶ್ವಸಂಸ್ಥೆಯ ಪ್ರತಿಷ್ಠಿತ ಎಸ್ ಡಿಜಿ ಪ್ರಶಸ್ತಿಯನ್ನು ಸೋನು ಸೂದ್ ಪಡೆದುಕೊಂಡಿದ್ದಾರೆ.

ಸೋನು ಸೂದ್ ಅವರಿಗೆ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್‌ಡಿಪಿ)ಯ ಪ್ರತಿಷ್ಠಿತ ಎಸ್‌ಡಿಜಿ ವಿಶೇಷ ಮಾನವೀಯ ಕ್ರಿಯಾ ಪ್ರಶಸ್ತಿಯನ್ನು ನೀಡಲಾಗಿದೆ.

ನಿನ್ನೆ ಸಂಜೆ ನಡೆದ ವಾಸ್ತವ ಸಮಾರಂಭದಲ್ಲಿ ಸೋನು ಸೂದ್ ಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಅವರು, ಇದು ಅಪರೂಪದ ಗೌರವ. ಯುಎನ್ ಮಾನ್ಯತೆ ಬಹಳ ವಿಶೇಷವಾಗಿದೆ. ಯಾವುದೇ ನಿರೀಕ್ಷೆಗಳಿಲ್ಲದೆ ನನ್ನ ದೇಶವಾಸಿಗಳಿಗೆ ನಾನು ಮಾಡಿದ ಸಣ್ಣ ಸಹಾಯಕ್ಕೆ ದೊಡ್ಡ ಮಾನ್ಯತೆ ಸಿಕ್ಕಿದೆ. ಯುಎನ್‌ಡಿಪಿಯನ್ನು ಅದರ ಪ್ರಯತ್ನಗಳನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ ಎಂದು ಹೇಳಿದರು.

ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸುವ ಕೆಲಸ ಮಾಡಿದ್ದರು. ಅಲ್ಲದೆ, ವಿದೇಶಗಳಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ಭಾರತಕ್ಕೆ ಕರೆಸಿಕೊಳ್ಳುವ ಮೂಲಕ ಮಾನವೀಯತೆ ಮೆರೆದಿದ್ದರು. ಇದಲ್ಲದೆ, ಅವರು ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಸಹ ಒದಗಿಸುತ್ತಿದ್ದಾರೆ. ಕೋವಿಡ್ 19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಅಗತ್ಯವಿರುವವರಿಗೆ ಉಚಿತ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದ್ದಾರೆ. ಅದಕ್ಕಾಗಿ ವಿಶ್ವಸಂಸ್ಥೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. (ಏಜೆನ್ಸೀಸ್, ಎಂ.ಎನ್)

 

Leave a Reply

comments

Related Articles

error: