ಮೈಸೂರು

ಬಾಬರಿ ಮಸೀದಿ ಧ್ವಂಸ ಪ್ರಕರಣ ತೀರ್ಪು ಇಂದು : ಮೈಸೂರಿನಲ್ಲಿ ಪೊಲೀಸ್ ಬಂದೋಬಸ್ತ್

ಮೈಸೂರು,ಸೆ.30:- ಲಕ್ನೋ ನ್ಯಾಯಾಲಯ ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತೀರ್ಪು ಪ್ರಕಟಿಸಲಿರುವ ಹಿನ್ನೆಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಮೈಸೂರು ನಗರದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಡಿಸಿಪಿ ಡಾ.ಎ.ಎನ್ ಪ್ರಕಾಶ್ ಗೌಡ ತಿಳಿಸಿದರು.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು, ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬೆಳಿಗ್ಗೆ 6 ರಿಂದ ಸಂಜೆವರೆಗೆ ಯಾವುದೇ ಮೆರವಣಿಗೆ, ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡಿಲ್ಲ. ನಗರದ ಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸಲಿದ್ದು, ಪ್ರಮುಖ ವೃತ್ತಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು ಎಂದರು.
2 ಕೆಎಸ್ ಆರ್ ಪಿ ತುಕಡಿ, 16 ಸಿಎಆರ್ ತುಕಡಿ ಮತ್ತು 2 ಕಮಾಂಡೊ ಪಡೆ ನಿಯೋಜನೆಗೊಂಡಿದ್ದು ನಗರದ ಎಲ್ಲ ಠಾಣೆಗಳ ಪೊಲೀಸರು ನಗರ ಗಸ್ತು ತಿರುಗಲಿದ್ದಾರೆ ಎಂದು ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: