ಮೈಸೂರು

ಚುನಾವಣಾ ಅಕ್ರಮಗಳ ಕುರಿತು ಕ್ರಮ ಕೈಗೊಳ್ಳದಿದ್ದಲ್ಲಿ ನಿಮ್ಮ ಮೇಲೆ ಕ್ರಮಕೈಗೊಳ್ಳಲಾಗುವುದು : ಡಿ.ರಂದೀಪ್ ಎಚ್ಚರಿಕೆ

ಮೈಸೂರು ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಈಗಾಗಲೇ ಚುನಾವಣಾ ಅಕ್ರಮಗಳ ಕುರಿತು ದೂರು ಬಂದಿದ್ದರೂ ಯಾಕೆ ಕ್ರಮಕೈಗೊಂಡಿಲ್ಲ ಎಂದು ಜಿಲ್ಲಾಧಿಕಾರಿ ಡಿ.ರಂದೀಪ್ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.

ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕುರಿತು ಅಧಿಕಾರಿಗಳ ಸಭೆಯಲ್ಲಿ ಮಾತನಾಡನಾಡಿದ ಅವರು, ನಂಜನಗೂಡಿನಲ್ಲಿ ಚುನಾವಣೆ ನಡೆದರೂ, ಮೈಸೂರು ಜಿಲ್ಲೆಯಲ್ಲಿಯೇ  ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿದೆ. ಚುನಾವಣಾ ಅಕ್ರಮಗಳಗಳ ದೂರು ನಗರ ಹಾಗೂ ಮೈಸೂರು ತಾಲೂಕಿನಲ್ಲಿ ಕೇಳಿಬರುತ್ತಿದೆ.ಆದರೆ ಇದುವರೆಗೂ ನೀವು ಒಂದು ಪ್ರಕರಣವನ್ನೂ ದಾಖಲಿಸಿಲ್ಲ. ನೀವು ಸರಿಯಾಗಿ ಕಾರ್ಯ ನಿರ್ವಹಿಸದಿದ್ದಲ್ಲಿ ನಿಮ್ಮ ಮೇಲೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದರು.

ಚುನಾವಣೆಯ ವಿಶೇಷ ವೀಕ್ಷಕ ಡಾ.ಕರುಣಾರಾಜ್ , ಪಂಕಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣನವರ್,ಡಿಸಿಪಿ ರುದ್ರಮುನಿ, ಮತ್ತಿತರರು ಉಪಸ್ಥಿತರಿದ್ದರು. (ಬಿ.ಎಂ-ಎಸ್.ಎಚ್)

Leave a Reply

comments

Related Articles

error: