ಕರ್ನಾಟಕಪ್ರಮುಖ ಸುದ್ದಿ

ಉಪ ಚುನಾವಣೆ: ಬಿಜೆಪಿ, ಕಾಂಗ್ರೆಸ್ ಕುತಂತ್ರಕ್ಕೆ ಪ್ರತಿತಂತ್ರ ಸಿದ್ಧ; ಎಚ್.ಡಿ.ಕುಮಾರಸ್ವಾಮಿ  

ಬೆಂಗಳೂರು,ಸೆ.30-ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಕುತಂತ್ರಕ್ಕೆ ಪ್ರತಿತಂತ್ರ ಸಿದ್ಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷವನ್ನು ಎದುರಿಸುವುದು ಜೆಡಿಎಸ್‌ ಪಾಲಿಗೆ ಸವಾಲಾಗಿದೆ. ನಮ್ಮದು ಪ್ರಾದೇಶಿಕ ಪಕ್ಷ. ಹೀಗಿದ್ದರೂ ಅವರಿಬ್ಬರ ಕುತಂತ್ರದ ವಿರುದ್ಧ ತಂತ್ರ ಹೂಡಲು ನಾವು ಮಾನಸಿಕವಾಗಿ ಸಜ್ಜಾಗಿದ್ದೇವೆ. ಉಪ ಚುನಾವಣೆಯಲ್ಲಿ ಗೆಲ್ಲಲೇ ಬೇಕಾದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದರು.

ಆರ್.ಆರ್.ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್‌ 3 ರಂದು ಉಪಚುನಾವಣೆ ನಡೆಯಲಿದೆ. ಜೆಡಿಎಸ್‌ ಶಾಸಕ ಸತ್ಯನಾರಾಯಣ ನಿಧನದಿಂದಾಗಿ ತೆರವಾಗಿರುವ ಶಿರಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಆಯ್ಕೆ ಇನ್ನೂ ಅಂತಿಮಗೊಂಡಿಲ್ಲ. ಕಾಂಗ್ರೆಸ್ ಟಿ.ಬಿ.ಜಯಚಂದ್ರ ಅವರಿಗೆ ಟಿಕೆಟ್‌ ಎಂದು ಘೋಷಣೆ ಮಾಡಿದೆ. ಬಿಜೆಪಿ ಹಾಗೂ ಜೆಡಿಎಸ್‌ ಶೀಘ್ರದಲ್ಲೇ ಅಭ್ಯರ್ಥಿ ಘೋಷಣೆ ಮಾಡುವುದಾಗಿ ತಿಳಿಸಿದೆ. ಇನ್ನು ಆರ್‌.ಆರ್‌.ನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನಗೆ ಟಿಕೆಟ್‌ ಸಿಗುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ಜೆಡಿಎಸ್‌ ಅಭ್ಯರ್ಥಿ ಯಾರು ಎಂಬುವುದು ಅಂತಿಮಗೊಂಡಿಲ್ಲ. (ಎಂ.ಎನ್)

 

Leave a Reply

comments

Related Articles

error: