ಪ್ರಮುಖ ಸುದ್ದಿ

ರಾಜ್ಯದಲ್ಲಿ ಹೆಚ್ಚುತ್ತಿದೆ ಕೊರೋನಾ ಮಹಾಮಾರಿಯ ಅಬ್ಬರ : 8,856 ಮಂದಿಗೆ ಸೋಂಕು

ರಾಜ್ಯ(ಬೆಂಗಳೂರು)ಅ.1:- ರಾಜ್ಯದಲ್ಲಿ ಕೊರೋನಾ ಮಹಾಮಾರಿಯ ಅಬ್ಬರ ಹೆಚ್ಚುತ್ತಲೇ ಇದೆ. ಸೋಂಕಿತರ ಸಂಖ್ಯೆ ಆರು ಲಕ್ಷದ ಗಡಿ ದಾಟಿದೆ. ಹೊಸದಾಗಿ 8,856 ಮಂದಿಗೆ ಸೋಂಕು ತಗುಲಿದೆ.

ಇದುವರೆಗೆ ರಾಜ್ಯದಲ್ಲಿ ಕೊರೋನಾ ಸೋಂಕಿಗೆ ತುತ್ತಾದವರ ಸಂಖ್ಯೆ 6,01,767ಕ್ಕೆ ತಲುಪಿದೆ. ಈ ಮಧ್ಯೆ 8,890 ಮಂದಿ ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ರಾಜ್ಯದಲ್ಲಿ 87 ಮಂದಿ ಮಹಾಮಾರಿ ಕೊರೋನಾಗೆ ಬಲಿಯಾಗಿದ್ದು ಬೆಂಗಳೂರು ನಗರದಲ್ಲಿ 4,226 ಪ್ರಕರಣಗಳು ವರದಿಯಾಗಿದ್ದು 24 ಮಂದಿ ಮೃತಪಟ್ಟಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: