ಮೈಸೂರು

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ-ಹೊರಗುತ್ತಿಗೆ ನೌಕರರ ಪ್ರತಿಭಟನೆ

ಮೈಸೂರು,ಅ.2:- ಎರಡನೇ ದಿನಕ್ಕೆ ಕಾಲಿಟ್ಟ ಕರ್ನಾಟಕ ರಾಜ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಪ್ರತಿಭಟನೆ ನಡೆಯುತ್ತಿದ್ದು,ಎರಡನೇ ದಿನಕ್ಕೆ ಕಾಲಿರಿಸಿದೆ.
ಮೈಸೂರಿನ ಜಿಲ್ಲಾ ಆರೋಗ್ಯ ಇಲಾಖಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆ ನಡೆಸುತ್ತಿದ್ದರೂ ಪ್ರತಿಭಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿಲ್ಲ. ನಮಗೆ ಖಾಯಂ ಸೇವಾ ಭದ್ರತೆ ನೀಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ವರ್ಗಾವಣೆ ಹಾಗೂ ಖಾಲಿ ಇರುವ ಜಾಗದಲ್ಲಿ ಸಾಮಾನ್ಯ ವರ್ಗಾವಣೆಗೆ ಅವಕಾಶ ನೀಡಬೇಕು. ಸಣ್ಣಪುಟ್ಟ ನೆಪವೊಡ್ಡಿ ಕೆಲಸಗಾರರನ್ನು ಕೆಲಸದಿಂದ ತೆಗೆಯುವುದನ್ನು ನಿಲ್ಲಿಸಬೇಕು. ನಮ್ಮ ಬೇಡಿಕೆಗಳಿಗೆ ಸರ್ಕಾರ ಕೂಡಲೇ ಸ್ಪಂದಿಸಬೇಕು. ಇಲ್ಲವಾದಲ್ಲಿ ನಮ್ಮ ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: