ದೇಶಪ್ರಮುಖ ಸುದ್ದಿ

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಎಸ್ಪಿ ಸೇರಿ ನಾಲ್ವರು ಪೊಲೀಸರ ಅಮಾನತು

ಲಖನೌ,ಅ.3-ಹತ್ರಾಸ್‌ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ರಾಸ್ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ (ಎಸ್‌ಪಿ) ಸೇರಿದಂತೆ ನಾಲ್ವರು ಪೊಲೀಸರನ್ನು ಉತ್ತರ ಪ್ರದೇಶ ಸರ್ಕಾರ ಅಮಾನತುಗೊಳಿಸಿದೆ.

ಘಟನೆಯ ತನಿಖೆ ನಡೆಸುತ್ತಿರುವ ಎಸ್‌ಐಟಿ ನಿನ್ನೆ ಪ್ರಾಥಮಿಕ ವರದಿ ನೀಡಿದ್ದು, ಇದರ ಆಧಾರದ ಮೇಲೆ ಹತ್ರಾಸ್ ಎಸ್‌ಪಿ ವಿಕ್ರಾಂತ್ ವೀರ್ ಹಾಗೂ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ವಿನೀತ್ ಜೈಸ್ವಾಲ್ ಅವರನ್ನು ಹತ್ರಾಸ್ ಎಸ್‌ಪಿ ಆಗಿ ನಿಯೋಜಿಸಲಾಗಿದೆ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಅವನೀಶ್ ಅವಸ್ಥಿ ತಿಳಿಸಿದ್ದಾರೆ.

ದೆಹಲಿ ಸೇರಿದಂತೆ ದೇಶದಾದ್ಯಂತ ಸಂತ್ರಸ್ತೆಗೆ ನ್ಯಾಯಕ್ಕಾಗಿ ವಿವಿಧ ಪಕ್ಷಗಳು ಹಾಗೂ ಸಂಘಟನೆಗಳ ಸದಸ್ಯರು ನಿನ್ನೆ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: