ಮೈಸೂರು

ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಅ.3:- ಉತ್ತರಪ್ರದೇಶದ ಹತ್ರಾಸ್ ನಲ್ಲಿ ಮತ್ತು ಬಲರಾಂಪುರ ಜಿಲ್ಲೆಯ ಗೋಂಸ್ಥಿಯಲ್ಲಿ ದಲಿಯತ ಯುವತಿಯನ್ನು ಸಾಮೂಹಿಕ ಅತ್ಯಾಚಾರ ಮಾಡಿ ಅವರ ಸಾವಿಗೆ ಕಾರಣರಾಗಿರುವ ಆರೋಪಿಗಳನ್ನು ಎನ್ ಕೌಂಟರ್ ಮಾಡುವಂತೆ ಹಾಗೂ ಅವರ ಕುಟುಂಬದ ಜೊತೆ ಅಮಾನವೀಯವಾಗಿ ನಡೆದುಕೊಂಡಿರುವ ಪೊಲೀಸ್ ಇಲಾಖೆಯ ವಜಾಕ್ಕೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.
ಜಿಲ್ಲಾಧಿಕಾರಿಗಳ ಕಛೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಅತ್ಯಾಚಾರ ನಡೆಸಿ ಸಾವಿಗೆ ಕಾರಣವಾದ ವ್ಯಕ್ತಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಎಷ್ಟೇ ಮೇಲ್ಜಾತಿಗೆ ಸೇರಿದ್ದರೂ ಅವರುಗಳ ಮೇಲೆ ಕಾನೂನು ಕ್ರಮ ಕೈಗೊಂಡು ಅವರಿಗೆ ಮರಣದಂಡನೆ ವಿಧಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ದೊಡ್ಡ ಸಿದ್ದು ಹಾದನೂರು, ಪುಟ್ಟಲಕ್ಷ್ಮಮ್ಮ, ಬನ್ನಹಳ್ಳಿ ಸೋಮಣ್ಣ, ಬಸವರಾಜು, ಸಣ್ಣಕುಮಾರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: