ಮೈಸೂರು

ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯ ದಿನ ಸಿಡಿಸುವ ಫಿರಂಗಿ ತಾಲೀಮಿಗೆ ಚಾಲನೆ

ಮೈಸೂರು,ಅ.4:- ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2020 ಪ್ರಯುಕ್ತ
ಮುಂಬರುವ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯ ದಿನ ಸಿಡಿಸುವ ಫಿರಂಗಿ ತಾಲೀಮಿಗೆ ಇಂದು ಚಾಲನೆ ನೀಡಲಾಯಿತು.
ಮೈಸೂರು ಅರಮನೆಯಲ್ಲಿರುವ ಹತ್ತು ಫಿರಂಗಿ ಗಾಡಿಗಳಿಗೆಮೈಸೂರು ನಗರ ಸಶಸ್ತ್ರ ಮೀಸಲು ಪಡೆಯ ಪೊಲೀಸರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿದರು. ಐತಿಹಾಸಿಕ ಅರಮನೆ ಆವರಣದಲ್ಲಿಂದು ಫಿರಂಗಿ ಗಾಡಿಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ನೇತೃತ್ವದಲ್ಲಿ ಪೂಜೆ ನೆರವೇರಿತು. ಜಂಬೂ ಸವಾರಿ ಮೆರವಣಿಗೆಯ ದಿನ ಕುಶಾಲ ತೋಪು ಸಿಡಿಸಲು ಫಿರಂಗಿ ಗಾಡಿಗಳನ್ನು ಬಳಸಲಾಗುತ್ತದೆ. ವಿಜಯದಶಮಿಯ ಜಂಬೂಸವಾರಿ ಮೆರವಣಿಗೆಯ ದಿನ ಒಟ್ಟು 21 ಬಾರಿ ನಗರ ಸಶಸ್ತ್ರ ಮೀಸಲು ಪಡೆಯ ಪೊಲೀಸರು ಕುಶಾಲ ತೋಪು ಸಿಡಿಸಲಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಡಾ.ಎ.ಎನ್.ಪ್ರಕಾಶ್ ಗೌಡ, ಅಪರಾಧ ಮತ್ತು ಸಂಚಾರಿ ವಿಭಾಗದ ಡಿಸಿಪಿ ಗೀತಾ ಪ್ರಸನ್ನ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳು ಪೂಜೆಯಲ್ಲಿ ಭಾಗಿಯಾಗಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: