ಪ್ರಮುಖ ಸುದ್ದಿ

ಶಿರಾ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮಗೆ ಕೊರೋನಾ ದೃಢ

ರಾಜ್ಯ(ತುಮಕೂರು)ಅ.7:- ಶಿರಾ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮಗೆ ಕೊರೋನಾ ಸೋಂಕು ಇರುವುದು ಧೃಡವಾಗಿದೆ.
ಈ ಬಗ್ಗೆ ದಿವಂಗತ ಸತ್ಯಾನಾರಾಯಣ್ ಪುತ್ರ ಸತ್ಯಪ್ರಕಾಶ್ ತಿಳಿಸಿದ್ದಾರೆ. ಕಳೆದ ಮೂರು ದಿನದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಭ್ಯರ್ಥಿ ಅಮ್ಮಾಜಮ್ಮ, ಕೊರೋನಾ ಸೋಂಕು ಪರೀಕ್ಷೆ ಮಾಡಿಸಿಕೊಂಡಿದ್ದರು. ಅದರ ವರದಿ ಬಂದಿದ್ದು ಕೊರೋನಾ ಸೋಂಕು ಇರುವುದು ಧೃಡವಾಗಿದೆ.
ಹೀಗಾಗಿ ಅಭ್ಯರ್ಥಿ ಅಮ್ಮಾಜಮ್ಮ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಿರಾ ಉಪಚುನಾವಣೆ ಕ್ಷೇತ್ರ ರಂಗೇರುತ್ತಿದ್ದು, ಜೆಡಿಎಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಫೈನಲ್ ಮಾಡಿ ದಿವಂಗತಮಾಜಿ ಶಾಸಕ ಸತ್ಯನಾರಾಯಣ್ ಅವರ ಹೆಂಡತಿ ಅಮ್ಮಾಜಮ್ಮ ಅವರಿಗೆ ಟಿಕೆಟ್ ಘೋಷಿಸಿದೆ. ನವೆಂಬರ್ 3 ರಂದು ತುಮಕೂರಿನ ಶಿರಾ ಉಪಚುನಾವಣೆ ನಡೆಯಲಿದ್ದು, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೆಗೌಡ ಅವರು ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: