ಪ್ರಮುಖ ಸುದ್ದಿ

ಪಂಜಾಬ್ ಆರೋಗ್ಯ ಸಚಿವ ಬಲ್ಬಿರ್ ಸಿಂಗ್ ಸಿಧು ಅವರಿಗೆ ಕೊರೋನಾ ಸೋಂಕು

ದೇಶ(ಚಂಡಿಗಢ)ಅ.7:- ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಪಂಜಾಬ್ ಆರೋಗ್ಯ ಸಚಿವ ಬಲ್ಬಿರ್ ಸಿಂಗ್ ಸಿಧು ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ.

ಆರೋಗ್ಯ ಸಚಿವ ಬಲ್ಬಿರ್ ಸಿಂಗ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಅವರಿಗೆ ಸ್ವಲ್ಪ ಜ್ವರ ಮತ್ತು ಗಂಟಲು ನೋವು ಕಾಣಿಸಿಕೊಂಡಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಸಚಿವರ ಆರೋಗ್ಯ ಸ್ಥಿರವಾಗಿದ್ದು, ಅವರು ಮನೆಯಲ್ಲಿಯೇ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೊಹಾಲಿ ಸಿವಿಲ್ ಸರ್ಜೆನ್ ಮಂಜಿತ್ ಸಿಂಗ್ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯಿದೆ ವಿರೋಧಿಸಿ ಸೋಮವಾರ ಸಂಗ್ರೂರ್ ನಲ್ಲಿ ನಡೆದ ಪ್ರತಿಭಟನೆ ಹಾಗೂ ‘ಖೇತಿ ಬಚಾವೊ ಯಾತ್ರೆ’ ಯಲ್ಲಿ ಬಲ್ಬಿರ್ ಸಿಂಗ್ ಅವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ಇತರ ಹಿರಿಯ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: