ಮೈಸೂರು

ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ಕರೆ

ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸುತ್ತಿರುವ ಕಳಲೆ ಕೇಶವಮೂರ್ತಿ ಹಾಗೂ ಡಾ.ಗೀತಾ ಮಹದೇವಪ್ರಸಾದ್ ಅವರನ್ನು ಬೆಂಬಲಿಸಬೇಕೆಂದು ರಾಜ್ಯ ಒಕ್ಕಲಿಗರ ಸಂಘದ ಡಾ.ಕೆ.ಮಹದೇವ್ ಒತ್ತಾಯಿಸಿದರು.

ಮೈಸೂರಿನ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ನಂತರ ಅನ್ನಭಾಗ್ಯ ಯೋಜನೆ ಜಾರಿಗೆ ತಂದು ಎಲ್ಲಾ ಜಾತಿಯ ಬಡವರಿಗೆ ಅನುಕೂಲವಾಗುವಂತೆ ಮಾಡಿದ್ದಾರೆ. ಬಡವರ ಏಳಿಗೆ ಮತ್ತು ದೀನ ದಲಿತರ ಉದ್ದಾರಕ್ಕಾಗಿ ಶ್ರಮಿಸುತ್ತಿದ್ದಾರೆ. ಹೀಗಾಗಿ ಮತದಾರರು  ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲಿಸಿ ಎಂದು ಮನವಿ ಮಾಡಿದರು. (ಕೆ.ಎಂ.ಆರ್-ಎಸ್.ಎಚ್)

Leave a Reply

comments

Related Articles

error: