ಮೈಸೂರು

ದಸರಾ ಹಿನ್ನೆಲೆ : ಅರಮನೆಯಿಂದ ತೆರಳಿದ ಚಾಮುಂಡೇಶ್ವರಿ ಉತ್ಸವ ಮೂರ್ತಿ

ಮೈಸೂರು,ಅ.7:- ನಾಡ ಹಬ್ಬ ಮೈಸೂರು ದಸರಾ 2020ಕ್ಕೆ ದಿನಗಣನೆ ಆರಂಭವಾಗಿದ್ದು, ಅ.17ರಂದು ವಿದ್ಯುಕ್ತ ಚಾಲನೆ ದೊರೆಯಲಿದೆ. ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ಸರಳ ಮತ್ತು ಸಾಂಪ್ರದಾಯಿಕ ದಸರಾಕ್ಕೆ ಒತ್ತು ನೀಡಲಾಗಿದೆ.
ದಸರಾ ಹಿನ್ನೆಲೆಯಲ್ಲಿ ಇಂದು ಜಂಬೂಸವಾರಿ ಉತ್ಸವದಲ್ಲಿ ಅಭಿಮನ್ಯುವಿನ ಅಂಬಾರಿ ಮೇಲೆ ವಿರಾಜಮಾನಳಾಗುವ ನಾಡದೇವಿ ಚಾಮುಂಡೇಶ್ವರಿ ಉತ್ಸವ ಮೂರ್ತಿ ಯನ್ನು ಅಂಬಾವಿಲಾಸ ಅರಮನೆಯಿಂದ ಚಾಮುಂಡಿ ಬೆಟ್ಟಕ್ಕೆ ಕೊಂಡೊಯ್ಯಲಾಯಿತು. ಪಂಚಲೋಹದಿಂದ ನಾಡದೇವಿ ಉತ್ಸವ ಮೂರ್ತಿ ರೂಪುಗೊಂಡಿದೆ. ಚಾಮುಂಡಿ ಬೆಟ್ಟದ ಆಡಳಿತಧಿಕಾರಿ ಸಮ್ಮುಖದಲ್ಲಿ ಚಾಮುಂಡಿ ಬೆಟ್ಟಕ್ಕೆ ನಾಡದೇವಿ ಉತ್ಸವ ಮೂರ್ತಿ ಕೊಂಡೊಯ್ಯಲಾಗಿದ್ದು, ಉತ್ಸವ ಮೂರ್ತಿಗೆ ಚಾಮುಂಡಿ ಬೆಟ್ಟದಲ್ಲಿ ನವರಾತ್ರಿ ದಿನಗಳಂದು ವಿಶೇಷ ಪೂಜೆ ನೆರವೇರಲಿದೆ. ಅದಕ್ಕೂ ಮುನ್ನ ಪ್ರತಿಮೆ ಶುಚಿಗೊಳಿಸಿ ಸಿಬ್ಬಂದಿಗಳು ಪೂಜೆಗೆ ಸಿದ್ಧತೆಗೊಳಿಸಲಿದ್ದಾರೆ. ಜಂಬೂ ಸವಾರಿ ದಿನ ಮತ್ತೆ ಅರಮನೆಗೆ ಮೂರ್ತಿಯನ್ನು ಕರೆತರಲಾಗುತ್ತದೆ. ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿಯಲ್ಲಿ ನಾಡದೇವಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿ ಪ್ರತಿಷ್ಠಾಪನೆಗೊಳ್ಳಲಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: