ಕರ್ನಾಟಕಪ್ರಮುಖ ಸುದ್ದಿ

ನಾಳೆ ಆರ್.ಆರ್.ನಗರ ಜೆಡಿಎಸ್ ಅಭ್ಯರ್ಥಿಯ ಘೋಷಣೆ

ಬೆಂಗಳೂರು,ಅ.7-ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯನ್ನು ನಾಳೆ ಘೋಷಣೆ ಮಾಡಲಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ನಗರದ ಜೆ.ಪಿ.ಭವನದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಸಭೆಯಲ್ಲಿ ದೇವೇಗೌಡರು ಹೇಳಿದರು. ಆರ್.ಆರ್.ನಗರ ಕ್ಷೇತ್ರದಲ್ಲಿಯೂ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಈಗಾಗಲೇ ಮೂವರ ಹೆಸರು ಅಂತಿಮವಾಗಿದ್ದು, ಅದರಲ್ಲಿ ಒಬ್ಬರನ್ನು ಆಯ್ಕೆ ಮಾಡಲಾಗುವುದು .ಅ.8 ರಂದು ಅಭ್ಯರ್ಥಿ ಯಾರೆಂಬುದನ್ನು ನಿರ್ಣಯ ಮಾಡಲಾಗುವುದು. ಸೋಲು-ಗೆಲುವು ಬೇರೆ ವಿಚಾರ. ಅಭ್ಯರ್ಥಿಯನ್ನಂತೂ ಕಣಕ್ಕಿಳಿಸುವುದು ಖಚಿತವೆಂದು ತಿಳಿಸಿದರು.

ಜೆಡಿಎಸ್‌ ಶಾಸಕ ಸತ್ಯನಾರಾಯಣ ನಿಧನದಿಂದಾಗಿ ಶಿರಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಸತ್ಯನಾರಾಯಣ ಪತ್ನಿ ಅಮ್ಮಾಜಮ್ಮ ಅವರನ್ನು ಕಣಕ್ಕೆ ಇಳಿಸಲು ಜೆಡಿಎಸ್ ನಿರ್ಧರಿಸಿದೆ. ಅಮ್ಮಾಜಮ್ಮ ಅವರ ಹೆಸರನ್ನು ದೇವೇಗೌಡರು ಘೋಷಿಸಿದ್ದಾರೆ.

ವಿಧನಾಪರಿಷತ್‌ನ ನಾಲ್ಕು ಸ್ಥಾನಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ನಿಟ್ಟಿನಲ್ಲಿ ತಂತ್ರ ರೂಪಿಸುವ ಕುರಿತು ಸಭೆ ನಡೆಯಿತು. ಸಭೆಯಲ್ಲಿ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳ ಅಭ್ಯರ್ಥಿಗಳು, ಆಯಾ ಕ್ಷೇತ್ರಗಳ ಮುಖಂಡರು, ಶಾಸಕರು ಸೇರಿದಂತೆ ಇತರರೊಂದಿಗೆ ಸಮಾಲೋಚನೆ ನಡೆಸಿದರು. ಪ್ರತಿಯೊಬ್ಬರ ಅಭಿಪ್ರಾಯಗಳನ್ನು ಪಡೆದ ದೇವೇಗೌಡ ಅವರು, ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಸೂಚನೆ ನೀಡಿದರು. (ಎಂ.ಎನ್)

 

Leave a Reply

comments

Related Articles

error: