ಮೈಸೂರು

ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಹೃದಯ ಶಸ್ತ್ರ ಚಿಕಿತ್ಸೆಯಲ್ಲಿ ದಾಖಲೆ ನಿರ್ಮಾಣ

ಹೃದಯ ಕವಾಟ ತೊಂದರೆಯಿಂದ ಬಳಲುತ್ತಿರುವ ರೋಗಿಗಳಿಗೆ ಐಯೋಟೆಕ್ ಲಿನೋಸ್ಕಿಸ್ ‘ತಾವಿ’ ಎಂಬ ವಿನೂತನ ಹಾಗೂ ಅತ್ಯುನ್ನತ ತಂತ್ರಜ್ಞಾನ ವಿಧಾನ ಬಳಸಿ  ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವಿನೂತನ ಮೈಲು ದಾಖಲೆಯನ್ನು ನಿರ್ಮಿಸಿದೆ ಎಂದು ಆಸ್ಪತ್ರೆಯ ಹಿರಿಯ ಹೃದ್ರೋಗ ತಜ್ಞ ಡಾ.ಎನ್.ಎಸ್.ರಾಜೇಂದ್ರ ಹೇಳಿದರು.

ಮೈಸೂರಿನ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ‍್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಈ ಶಸ್ತ್ರ ಚಿಕಿತ್ಸಾ ವಿಧಾನವನ್ನು ಪ್ರಯೋಗ ಮಾಡಲಾಗಿದೆ. ಹೃದಯ ಸಂಬಂಧಿ ರೋಗಿಗಳು ಇದರ ಲಾಭವನ್ನು ಪಡೆದಿದ್ದಾರೆ. ಅಮೇರಿಕಾ ಮತ್ತು ಯುರೋಪ್ ದೇಶಗಳಿಂದ ಈ ಶಸ್ತ್ರಚಿಕಿತ್ಸಾ ಯಂತ್ರವನ್ನು ಆಮದು ಮಾಡಿಕೊಳ್ಳಲಾಗಿದೆ. ಹೀಗಾಗಿ ಇದರ ವೆಚ್ಚ ಸ್ವಲ್ಪ ದುಬಾರಿ ಎಂದರು. ಯೂರೋಪ್ ಹಾಗೂ ಅಮೆರಿಕಾದಲ್ಲಿ ಹೆಚ್ಚಿನ ಚಾಲ್ತಿಯಿರುವ ಶಸ್ತ್ರ ಚಿಕಿತ್ಸೆ ದೇಶದಲ್ಲಿ ಅಷ್ಟೊಂದು ಬಳಕೆಯಾಗುತ್ತಿಲ್ಲ, ಹೃದಯ ಶಸ್ತ್ರ ಚಿಕಿತ್ಸೆಯಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ ಎಂದರು.

ಅಲ್ಲದೇ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶುಕ್ರವಾರ ಉಚಿತ ಹೃದ್ರೋಗ ತಪಾಸಣಾ ಶಿಬಿರವನ್ನು ಆಯೋಜಿಸಲಾಗುತ್ತದೆ. ಹಲವಾರು ಉಚಿತ ತಪಾಸಣೆಗಳನ್ನು ಮಾಡಲಾಗುತ್ತದೆ. ಈಗಾಗಲೇ 5 ಸಾವಿರ ಮಂದಿ ಈ ತಪಾಸಣೆಯ ಲಾಭ ಪಡೆದಿದ್ದಾರೆ. 300 ಕ್ಕೂ ಹೆಚ್ಚು ರೋಗಿಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂದು ತಿಳಿಸಿದರು.

ಹೃದಯ ಕವಾಟ ಶಸ್ತ್ರ ಚಿಕಿತ್ಸೆಗೊಳಗಾದ ಬೆಂಗಳೂರು ಮೂಲದ ವಸುಂಧರಾ  ಮಾತನಾಡಿ, ನನಗೆ ಉಸಿರಾಟದ ತೊಂದರೆ ಇತ್ತು. ದೇಹದಲ್ಲಿ ಶೇ.90 ನೀರು ಶೇಖರಣೆಯಾಗಿತ್ತು. ಈ ಚಿಕಿತ್ಸೆ ಮಾಡಿಸಿಕೊಂಡ ನಂತರ ನನ್ನ ಆರೋಗ್ಯ ಸುಧಾರಿಸಿದೆ ಎಂದು ಹೇಳಿದರು. ನಾನು ಸಹಜ ಸ್ಥಿತಿಯಲ್ಲಿ ಸಾಮಾನ್ಯ ಜೀವನ ನಡೆಸುತ್ತಿರುವೆ ಎಂದರು

ಸುದ್ದಿಗೋಷ್ಠಿಯಲ್ಲಿ ಆಸ್ಪತ್ರೆಯ ವೈದ್ಯ ಡಾ.ಎಂ.ಎನ್. ರವಿ ಹಾಜರಿದ್ದರು. (ಕೆ.ಎಂ.ಆರ್-ಎಸ್.ಎಚ್)

Leave a Reply

comments

Related Articles

error: