ಮೈಸೂರು

ಹತ್ರಾಸ್ ಪ್ರಕರಣ :ಟಿ ನರಸೀಪುರದಲ್ಲಿ ಮುಂದುವರಿದ ಪ್ರತಿಭಟನೆ

ಮೈಸೂರು,ಆ.8:- ಉತ್ತರಪ್ರದೇಶದ ಹತ್ರಾಸ್ ನಲ್ಲಿ ಯುವತಿಯ ಮೇಲೆ ಹತ್ಯಾಚಾರವೆಸಗಿ ಕೊಲೆಗೈದಿರುವ ಘಟನೆ ಖಂಡಿಸಿ ಟಿ. ನರಸೀಪುರದಲ್ಲಿ ಪ್ರತಿಭಟನೆ ಮುಂದುವರಿದಿದೆ.

ತಿ.ನರಸೀಪುರ ತಾಲ್ಲೂಕು ನಾಯಕರ ಸಂಘದ ವತಿಯಿಂದ ಪ್ರತಿಭಟನೆ ನಡೆಯುತ್ತಿದ್ದು ಪಟ್ಟಣದ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆ ಮುಂಭಾಗ ಸೇರಿದ ಪ್ರತಿಭಟನಾಕಾರರು
ಉತ್ತರಪ್ರದೇಶ ಸರ್ಕಾರ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಜಿಪಂ ಸದಸ್ಯ ಮಂಜುನಾಥ್ ದಲಿತ ಯುವತಿ ಮೇಲಿನ ಅ ತ್ಯಾಚಾರ ಖಂಡನೀಯ. ಮಹಿಳೆಯರು, ವಿದ್ಯಾರ್ಥಿಗಳಿಗೆ ಉತ್ತರಪ್ರದೇಶದಲ್ಲಿ ರಕ್ಷಣೆ ಇಲ್ಲದಂತಾಗಿದೆ.
ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ನೀಡಬೇಕು. ಮನಿಷಾ ಆಕೆಯ ಕುಟುಂಬಕ್ಕೆ ಪರಿಹಾರ ನೀಡಿ ನ್ಯಾಯ ಕೊಡಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭ ಮುಖಂಡರಾದ ನಾಗರಾಜು,ಸುಬ್ಬನಾಯ್ಕ,ಮರಿಸ್ವಾಮ,ಚಿಕ್ಕಣ್ಣ ಸೇರಿದಂತೆ ಮತ್ತಿತರರು ಹಾಜರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: