ಮೈಸೂರು

ಇಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಮೈಸೂರು, ಅ.9:- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ 66/11 ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ಅಗ್ರಹಾರ ಫೀಡರ್ಲ್ಲಿ ಅಕ್ಟೋಬರ್ 09 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆ ಅಂದು ಶಂಕರಮಠ, ಉತ್ತರಾಧಿಮಠ, ರಾಮಾನುಜ ರಸ್ತೆ, ಅಗ್ರಹಾರ, ತ್ಯಾಗರಾಜ ರಸ್ತೆ, ಸುಣ್ಣದಕೇರಿ, ಹೊಸಕೇರಿ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಎನ್.ಆರ್.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: