ಮೈಸೂರು

ಕೋವಿಡ್ ಹೆಚ್ಚಳ ಹಿನ್ನೆಲೆ : ದಸರಾ ಸಮೀಪಿಸುತ್ತಿರುವ ಕಾರಣ ಆರೋಗ್ಯ ಇಲಾಖೆಯ ತಾಂತ್ರಿಕ ತಜ್ಞರ ತಂಡ ಇಂದು ಮೈಸೂರಿಗೆ

ಮೈಸೂರು,ಅ.9:- ಮೈಸೂರಿನಲ್ಲಿ ಕೋವಿಡ್-19 ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ದಸರಾ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲು ಆರೋಗ್ಯ ಇಲಾಖೆಯ ತಾಂತ್ರಿಕ ತಜ್ಞರ ತಂಡ ಇಂದು ನಗರಕ್ಕೆ ಆಗಮಿಸಲಿದೆ.
ದಸರಾಕ್ಕೆ ಕೈಗೊಂಡಿರುವ ಸಿದ್ಧತೆ, ದೀಪಾಲಂಕಾರ, ಸಾಮಸ್ಕೃತಿಕ ಕಾರ್ಯಕ್ರಮಗಳು ಇರಬೇಕೇ, ಬೇಡವೇ ಎಷ್ಟು ಜನರನ್ನು ಸೇರಿಸಬೇಕು. ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಸ್ಥಳೀಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾಹಿತಿ ಕಲೆಹಾಕಲಿದೆ.
ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಸುದರ್ಶನ್, ಸದಸ್ಯ ಡಾ.ಲೋಕೇಶ್, ಸದಸ್ಯ ಕಾರ್ಯದರ್ಶಿ ಡಾ.ಮಹಮ್ಮದ್ ಷರೀಫ್ ಅವರುಗಳು ಮೈಸೂರು ಅರಮನೆ, ಚಾಮುಂಡಿಬೆಟ್ಟಕ್ಕೆ ಭೇಟಿ ನೀಟಿ ಪರಿಶೀಲನೆ ನಡೆಸಲಿದ್ದಾರೆ. ಭದ್ರತಾ ತಂಡ ಕೂಡ ಬಂದು ಪರಿಶೀಲನೆ ನಡೆಸಲಿವೆ ಎಂದು ಬಲ್ಲ ಮೂಲಗಳು ತಿಳಿಸಿವೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: