ಮೈಸೂರು

ಅರಮನೆ ಪಾರಂಪರಿಕ ದಸರಾ ಕಾರ್ಯಕ್ರಮಗಳ ಪಟ್ಟಿ ಸಿದ್ಧ

ಮೈಸೂರು,ಅ,9:- ವಿಶ್ವವಿಖ್ಯಾತ ಮೈಸೂರು ದಸರಾ 2020ರ ಅರಮನೆ ಪಾರಂಪರಿಕ ದಸರಾ ಕಾರ್ಯಕ್ರಮಗಳ ಪಟ್ಟಿ ಸಿದ್ಧಗೊಂಡಿದೆ.
ಅಕ್ಟೋಬರ್ 17ರಂದು 7.45ರಿಂದ 8.15ರ ಶುಭ ಮುಹೂರ್ತದಲ್ಲಿ ಯದುವಂಶದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ಗೆ ಕಂಕಣಧಾರಣೆ ನೆರವೇರಿಸಲಾಗುತ್ತಿದೆ.
ಬೆಳಿಗ್ಗೆ 10 ಗಂಟೆಗೆ ಕಳಸ ಪೂಜೆ ಸೇರಿ ಇತರ ಧಾರ್ಮಿಕ ಆಚರಣೆ ನಡೆಯಲಿದ್ದು, ನಂತರ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಕೊರೋನಾ ಕಾರಣಕ್ಕೆ ಖಾಸಗಿ ದರ್ಬಾರ್ ಗೆ ಮಾಧ್ಯಮಗಳಿಗೂ ನಿರ್ಬಂಧ ವಿಧಿಸಲಾಗಿದೆ. ಅ.21 ರಂದು ಬೆಳಿಗ್ಗೆ 9.45ಕ್ಕೆ ಸರಸ್ವತಿ ಪೂಜೆ ನಡೆಯಲಿದೆ. ಅಕ್ಟೋಬರ್ 25ಕ್ಕೆ ಚಂಡಿ ಹೋಮ ನಡೆಯಲಿದೆ. ಆಯುಧಗಳಿಗೆ ಪಟ್ಟದ ಆನೆ ಕುದುರೆ ಹಸು ವಾಹನಗಳಿಗೆ ಪೂಜೆ ನಡೆಯಲಿದೆ. ಅ. 26ರಂದು ವಿಜಯದಶಮಿ ಮೆರವಣಿಗೆ ನಡೆಯಲಿದ್ದು, ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇವಸ್ಥಾನದಲ್ಲಿ ಬನ್ನಿ ಮರಕ್ಕೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜೆ ನೆರವೇರಿಸಲಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: