ಮೈಸೂರು

ಎರಡನೇ ದಿನಕ್ಕೆ ಕಾಲಿರಿಸಿದ ಪೌರಕಾರ್ಮಿಕರ ಪ್ರತಿಭಟನೆ

ಮೈಸೂರು,ಅ.9:- ಗುತ್ತಿಗೆ ಪೌರಕಾರ್ಮಿಕರಿಗೆ ನೇರಪಾವತಿ ಮಾಡುವಂತೆ ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆಯ ಆವರಣದಲ್ಲಿ ಮೈಸೂರು ನಗರ ಪಾಲಿಕೆ ಖಾಯಂ ಪೌರಕಾರ್ಮಿಕರು ಹಾಗೂ ಗುತ್ತಿಗೆ ಪೌರಕಾರ್ಮಿಕರ ಮಹಾ ಸಂಘದ ವತಿಯಿಂದ ನಡೆಯುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿರಿಸಿದೆ.
ಪ್ರತಿಭಟನೆ ಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಮೈಸೂರು ಮಹಾನಗರ ಪಾಲಿಕೆಯಲ್ಲಿ 1563ಮಂದಿ ಗುತ್ತಿಗೆ ಪೌರಕಾರ್ಮಕರನ್ನು ನೇರನೇಮಕಾತಿ ಮಾಡುವಂತೆ ಜಿಲ್ಲಾಧಿಕಾರಿಗಳು ಕೌನ್ಸಿಲ್ ಅನುಮೋದನೆಯನ್ನು ಪಡೆದು ಎಲ್ಲಾ ಕಾರ್ಮಿಕರಿಗೆ ನೇರ ಪಾವತಿ ನೀಡುವಂತೆ ಆದೇಶಿಸಿದ್ದಾರೆ. ಆದೇಶ ಮಾಡಿ ಸುಮಾರು 4ತಿಂಗಳು ಕಳೆದರೂ ಕೌನ್ಸಿಲ್ ಅನುಮೋದನೆಯನ್ನು ಪಡೆಯದೆ ವಿಳಂಬ ಧೋರಣೆ ಮಾಡುತ್ತ ಕಾಲಹರಣ ಮಾಡುತ್ತಿರುವುದು ಸರಿಯಲ್ಲ. ಪೌರಕಾರ್ಮಿಕರಿಗೆ ನೇರವಾಗಿ ವೇತನ ನೀಡುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಉನ್ನತ ಸಮಿತಿ ಅಧ್ಯಕ್ಷ ಎನ್.ಮಾರ, ಅಧ್ಯಕ್ಷ ಮಹದೇವ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ರಾಜ್ಯಾಧ್ಯಕ್ಷ ಆರ್.ಶಿವಣ್ಣ, ಮಾಜಿ ಅಧ್ಯಕ್ಷ ಆರ್ಮುಗಂ ಸೇರಿದಂತೆ ಹಲವರು ಭಾಗವಹಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: