ಮೈಸೂರು

ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೆ ನ.7ರಂದು ಚುನಾವಣೆ

ಮೈಸೂರು,ಅ.10:- ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೆ 2020-23ರ ಅವಧಿಯ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಚುನಾವಣೆ ನಡೆಸಲು ತೀರ್ಮಾನಿಸಲಾಗಿದ್ದು, ನವೆಂಬರ್ 7ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಅಧಿಕಾರಿ ಗಳಾದ ಎಂ. ಎಸ್. ಕಾಶಿನಾಥ್ ತಿಳಿಸಿದರು.
ಮೈಸೂರು ಜಿಲ್ಲಾ ಪತ್ರಕರ್ತರಭವನಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 18/10/2020ರ ಭಾನುವಾರ ಅರ್ಹ ಮತದಾರರ ಪಟ್ಟಿ ಪ್ರಕಟಿಸಲಾಗುವುದು. 22/10/2020ರ ಗುರುವಾರದಿಂದ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ನಾಮಪತ್ರ ಸಲ್ಲಿಕೆ ನಡೆಯಲಿದೆ. 26/10/2020ರ ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. 27/10/2020ರ ಮಂಗಳವಾರ ನಾಮಪತ್ರಗಳ ಪರಿಶೀಲನೆ ಹಾಗೂ ಕ್ರಮಬದ್ಧ ಅಭ್ಯರ್ಥಿಗಳ ಪಟ್ಟಿಯನ್ನು ಬೆಳಿಗ್ಗೆ 11ಗಂಟೆಗೆ ಪ್ರಕಟಿಸಲಾಗುವುದು.
29/10/2020 ಗುರುವಾರ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು ಮಧ್ಯಾಹ್ನ 12ಗಂಟೆಯೊಳಗೆ ಪಡೆಯಬೇಕು. ಅದೇ ದಿನ ಮಧ್ಯಾಹ್ನ 2ಗಂಟೆಯ ನಂತರ ಕಣದಲ್ಲಿ ಉಳಿದ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಾಗುವುದು. 7/11/2020ರ ಶನಿವಾರ ಮತಹಕ್ಕು ಚಲಾವಣೆ ಇದ್ದು, ಬೆಳಿಗ್ಗೆ 8ರಿಂದ ಮಧ್ಯಾಹ್ನ 2ಗಂಟೆಯವರೆಗೆ ನಡೆಯಲಿದೆ. ಅದೇ ದಿನ ಮಧ್ಯಾಹ್ನ 4ಗಂಟೆಯ ನಂತರ ಮತ ಎಣಿಕೆ ನಡೆಯಲಿದ್ದು, ನಂತರ ಫಲಿತಾಂಶ ಘೋಷಿಸಲಾಗುವುದು ಎಂದು ಮಾಹಿತಿ ನೀಡಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: