ಮೈಸೂರು

ದಕ್ಷಿಣ ಕಾಶಿಯಲ್ಲಿ ದೊಡ್ಡಜಾತ್ರಾ ಸಂಭ್ರಮ : ಭಕ್ತರಿಂದ ವಿಶೇಷ ಪೂಜೆ

ಮೈಸೂರು ಜಿಲ್ಲೆಯ ದಕ್ಷಿಣ ಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನ ನಂಜುಂಡೇಶ್ವರನಿಗೆ ಇಂದು ದೊಡ್ಡಜಾತ್ರಾ ಸಂಭ್ರಮ.

ಶುಕ್ರವಾರ ಬೆಳಿಗ್ಗೆ 5.20ರಿಂದ 6.20ರ ಮಖಾ ನಕ್ಷತ್ರದ ಮೀನ ಲಗ್ನದಲ್ಲಿ ಲಕ್ಷಾಂತರ ಭಕ್ತಾದಿಗಳ ಸಮ್ಮುಖದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭ  ಗೌತಮ, ಪಾರ್ವತಿದೇವಿ, ಗಣಪತಿ, ಸುಬ್ರಹ್ಮಣ್ಯೇಶ್ವರ, ಚಂಡಿಕೇಶ್ವರ ದೇವರುಗಳ ಉತ್ಸವ ಮೂರ್ತಿಗಳ ಮೆರವಣಿಗೆ ನಡೆಯಿತು. 89 ಅಡಿ ಎತ್ತರದ ಅಲಂಕೃತ ಗೌತಮ ರಥ ಶ್ರೀಕಂಠೇಶ್ವರ ಜಾತ್ರೆಯ ಕೇಂದ್ರ ಬಿಂದುವಾಗಿದೆ. 100 ಟನ್ ತೂಕದ ರಥ ಎಳೆಯಲು 240 ಅಡಿ ಉದ್ದದ ಹಗ್ಗವನ್ನು ಬಳಕೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ರಥೋತ್ಸವದಲ್ಲಿ ಭಾಗವಹಿಸುವ 112 ಸಿಬ್ಬಂದಿಗಳಿಗೆ ಮುಜರಾಯಿ ಇಲಾಖೆಯಿಂದ ಇದೇ ಪ್ರಥಮಬಾರಿಗೆ ವಿಮಾ ಸೌಲಭ್ಯ ಕಲ್ಪಿಸಲಾಗಿದೆ. ಸುಮಾರು 89 ಅಡಿ ಎತ್ತರದ ಅಲಂಕೃತ ಗೌತಮ ರಥದಲ್ಲಿ ಶ್ರೀಕಂಠೇಶ್ವರ ಕಂಗೊಳಿಸುತ್ತಿದ್ದಾನೆ. ಪುಣ್ಯಸ್ನಾನಕ್ಕೆ ಬರುವ ಭಕ್ತರಿಗಾಗಿ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ. ತಾತ್ಕಾಲಿಕವಾಗಿ 35 ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು, 7 ಮೊಬೈಲ್ ವಾಚ್ ಟವರ್ ಬಂದು ಹೋಗುವ ಜನರ ಮೇಲೆ ಕಣ್ಣಿರಿಸಲಿದೆ. ಅತ್ಯಂತ ಬಿಗು ಬಂದೋಬಸ್ತ್ ನಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತಿದೆ. ವಿಶೇಷ ಕ್ರಮ ವಹಿಸಿರುವ ಜಿಲ್ಲಾ ಪೊಲೀಸರು ಹದ್ದಿನ ಕಣ್ಣಿರಿಸಿದ್ದಾರೆ.

ದೂರದ ಊರುಗಳಿಂದ ಆಗಮಿಸಿದ ಲಕ್ಷಾಂತರ ಭಕ್ತಾದಿಗಳು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ನಂಜುಂಡೇಶ್ವರನನ್ನು ಕಣ್ತುಂಬಿಸಿಕೊಳ್ಳುತ್ತಿದ್ದಾರೆ.

ಚುನಾವಣಾ ಪ್ರಯುಕ್ತ ನಂಜನಗೂಡಿನಲ್ಲಿ ವಾಸ್ತವ್ಯವಿರುವ ಸಂಸದೆ ನಂಜನಗೂಡು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.   ನಗರ ಮತ್ತು ಪಟ್ಟಣ ಸ್ಥಾಯಿ ಸಮಿತಿ ಅಧ್ಯಕ್ಷ ನಂದೀಶ್ ಪ್ರೀತಂ ಜೊತೆಗಿದ್ದರು. (ಕೆ.ಎಸ್.ಎಸ್.ಎಚ್)

Leave a Reply

comments

Related Articles

error: