ಪ್ರಮುಖ ಸುದ್ದಿ

ರಾಜ್ಯದ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯ(ಬೆಂಗಳೂರು)ಅ.12:- ರಾಜ್ಯದ ಕರಾವಳಿ ಭಾಗದಲ್ಲಿ ಇಂದು ಮತ್ತು ನಾಳೆ (ಅ.12, 13) ಗುಡುಗು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ರುವುದರಿಂದ ರಾಜ್ಯದ ಕರಾವಳಿ ಹಾಗೂ ಒಳನಾಡಿನಲ್ಲಿ ಇದೇ 15ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೀಗಾಗಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ʻರೆಡ್ ಅಲರ್ಟ್ʼ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇರುವುದರಿಂದ ʻಆರೆಂಜ್ ಅಲರ್ಟ್ʼ ಘೋಷಿಸಲಾಗಿದೆ.
ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲೂ ಗುಡುಗು, ಸಿಡಿಲಿನೊಂದಿಗೆ ಹೆಚ್ಚು ಮಳೆಯಾಗುವ ಸೂಚನೆ ಇದೆ ಎಂದು ತಿಳಿಸಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: