ಪ್ರಮುಖ ಸುದ್ದಿಮೈಸೂರು

ಮೈಸೂರು ದಸರಾಕ್ಕೆ ಸಿಎಂ ಗೆ ಅಧಿಕೃತ ಆಹ್ವಾನ ನೀಡಿದ ಸಚಿವ ಎಸ್ ಟಿ ಎಸ್

ಮೈಸೂರು/ ಬೆಂಗಳೂರು, ಅ 12: – ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಭೇಟಿಯಾಗಿ ಇಂದು ಆಹ್ವಾನಿ ಸಿದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಾಸಕರಾದ ರಾಮದಾಸ್, ನಾಗೇಂದ್ರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅ.17ರಂದು ಮೈಸೂರು ದಸರಾ ಮಹೋತ್ಸವ 2020ಕ್ಕೆ ಚಾಮುಂಡಿ ಬೆಟ್ಟದಲ್ಲಿ ವಿದ್ಯುಕ್ತ ಚಾಲನೆ ದೊರಕಲಿದೆ. ಜಯದೇವ ಆಸ್ಪತ್ರೆ ಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಉದ್ಘಾಟನೆ ನೆರವೇರಿಸಲಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: