ಮೈಸೂರು

ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

ಶ್ರೀಕಂಠೇಶ್ವರ ದೊಡ್ಡ ಜಾತ್ರೆಯಲ್ಲಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ  ತಾಳಶಾಸನ ಗ್ರಾಮದ ನಿವಾಸಿ ಜಗದೀಶ್(42) ಎಂಬಾತನೇ ಮೃತ ದುರ್ದೈವಿ.  ತಮ್ಮ ಕುಟುಂಬ, ಪರಿವಾರದೊಂದಿಗೆ ಜಾತ್ರೆಗೆ ಆಗಮಿಸಿದ್ದ ಜಗದೀಶ್, ಭಕ್ತರಿಗೆ ಅನ್ನದಾನ ಮಾಡಲು ರಾತ್ರಿ ಅಡುಗೆ ಸಿದ್ಧಪಡಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಬಲ್ಬ್ ಬದಲಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್.-ಎಸ್.ಎಚ್)

Leave a Reply

comments

Related Articles

error: