ಮೈಸೂರು

ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ : ಡಾ.ಜಿ.ಪರಮೇಶ್ವರ್ ವಿಶ್ವಾಸ

ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಜಯಸಾಧಿಸುವ ನಿರೀಕ್ಷೆ ಯಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ತಿಳಿಸಿದರು.

ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ನಾಡಿ ಮಿಡಿತವನ್ನು ಸೂಕ್ಷ್ಮತೆಯಿಂದ ಗಮನಿಸಿದರೆ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ  ಎಂಬ ವಿಶ್ವಾಸವಿದೆ. ಎರಡೂ ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ ಮುಂಬರುವ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗುವುದಿಲ್ಲ.ರಾಜ್ಯ ಸರ್ಕಾರದ ಸಾಧನೆ ಕುರಿತು ಜನತೆ ನೀಡುವ ಉತ್ತರ ಇದಾಗಲಿದೆ ಎಂದು ಪರಮೇಶ್ವರ್ ತಮ್ಮ ಸರ್ಕಾರದ ಗುಣಗಾನ ಮಾಡಿದರು. ಎರಡೂ ಕ್ಷೇತ್ರಗಳ ಚುನಾವಣಾ ಫಲಿತಾಂಶ ಏನೇ ಆದರೂ ಅದನ್ನು ಧನಾತ್ಮಕವಾಗಿ ಸ್ವೀಕರಸುತ್ತೇವೆ ಎಂದರು. ಇನ್ನೂ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮಿಹೆಬ್ಬಾಳ್ಕರ್ ಮತದಾರರಿಗೆ ಹಣ ಹಂಚಿರುವ ಆರೋಪದ ಬಗ್ಗೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿದೆ.
ಪ್ರಕರಣದ ಸತ್ಯಾಸತ್ಯತೆಯನ್ನು ಚುನಾವಣಾ ಆಯೋಗವೇ ಪರಿಶೀಲನೆ ಮಾಡಬೇಕಿದೆ ಎಂದರು. ಪರಮೇಶ್ವರ್ ಹಣ ನೀಡಿ ಮಂತ್ರಿಯಾಗಿದ್ದಾರೆಂದು ಮಾಜಿ ಸಚಿವ ವಿ. ಶ್ರೀನಿವಾಸಪ್ರಸಾದ್ ಮಾಡಿರುವ ಆರೋಪಗಳನ್ನು ಅಲ್ಲಗಳೆದ ಪರಮೇಶ್ವರ್, ನಾನು ಇದುವರೆಗೆ ಹಲವಾರು ಚುನಾವಣೆಯಲ್ಲಿ ಸೋತಿದ್ದೇನೆ, ಗೆದ್ದಿದ್ದೇನೆ. ಆದರೆ ಎಂದೂ ಕೂಡ ಹಣ ನೀಡಿ ಮಂತ್ರಿ ಮಾಡಿ ಎಂದು ಯಾರ ಬಳಿಗೂ ಹೋಗಿಲ್ಲವೆಂದು ಪ್ರಸಾದ್ ಅವರಿಗೆ ತಿರುಗೇಟು ನೀಡಿದರು.

ರಾಜ್ಯದ ಕರಾವಳಿ ಭಾಗದಲ್ಲಿ ಇತ್ತೀಚೆಗೆ ತಲೆದೋತ್ತಿರುವ ಕೋಮು ಸಂಘರ್ಷವನ್ನು ಮಟ್ಟಹಾಕಲು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಇದೇವೇಳೆ ಎಚ್ಚರಿಕೆಯನ್ನು ನೀಡಿದರು. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: