ಪ್ರಮುಖ ಸುದ್ದಿಮೈಸೂರು

ಕೊರೋನಾ ಹಿನ್ನೆಲೆ : ಗ್ರಾಮೀಣ ಪ್ರದೇಶದ ಜನತೆ ದಯವಿಟ್ಟು ದಸರಾಗೆ ಬರಬೇಡಿ ; ಜಿ.ಪಂ ಸಿಇಒ ಡಿ.ಭಾರತಿ ಮನವಿ

ಮೈಸೂರು,ಅ.13:- ಕೊರೋನಾ ಮಹಾಮಾರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಜನತೆ ದಯವಿಟ್ಟು ದಸರಾಗೆ ಬರಬೇಡಿ ಎಂದು ಮೈಸೂರು ಜಿ‌.ಪಂ ಸಿಇಓ ಡಿ.ಭಾರತಿ ಮನವಿ ಮಾಡಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಅವರು ಜಿ‌.ಪಂ ಸಿಇಓ ಡಿ.ಭಾರತಿ, ಗ್ರಾಮೀಣ ಪ್ರದೇಶದ ಜನತೆ ದಯವಿಟ್ಟು ದಸರಾಗೆ ಬರಬೇಡಿ ದಸರಾ ನೋಡುವ ಆಸೆಯಿಂದ ಬರಲೇಬೇಡಿ. ದಸರಾದಲ್ಲಿ ಜಂಬೂಸವಾರಿ ಮೆರವಣಿಗೆ ಇರುವುದಿಲ್ಲ. ಟೆಕ್ನಿಕಲ್ ತಂಡದ ವರದಿ ಪ್ರಕಾರ ಅರಮನೆಯಲ್ಲಿ ಮಾತ್ರ ಜಂಬೂಸವಾರಿ ನಡೆಯಲಿದೆ. ಅರಮನೆ ಒಳಗೆ 300ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಸಾರ್ವಜನಿಕರಿಗೆ ನೇರವಾಗಿ ಜಂಬೂಸವಾರಿ ನೋಡುವ ಅವಕಾಶ ಇರುವುದಿಲ್ಲ. ಹಾಗಾಗಿ ಅನಾವಶ್ಯಕವಾಗಿ ಗ್ರಾಮೀಣ ಪ್ರದೇಶದ ಜನರು ನಗರಕ್ಕೆ ಬರಬೇಡಿ ಎಂದು ಮನವಿ ಮಾಡಿದ್ದಾರೆ.
ಎಲ್ಲರೂ ನಿಮ್ಮ ನಿಮ್ಮ ಮನೆಗಳಲ್ಲಿಯೇ ಇದ್ದು ಟಿವಿಗಳಲ್ಲಿ ದಸರಾ ನೋಡಿ. ಸಾಮಾಜಿಕ ಜಾಲತಾಣಗಳಲ್ಲಿ ನೇರ ಪ್ರಸಾರ ವ್ಯವಸ್ಥೆ ಮಾಡಲಾಗುತ್ತದೆ. ಗ್ರಾಮೀಣ ಭಾಗದ ಜನರು ನಗರಕ್ಕೆ ಬಂದು ಕೊರೋನಾ ಹಬ್ಬಲು ಅವಕಾಶ ಮಾಡಿಕೊಡಬೇಡಿ. ಸೋಂಕಿನ ಲಕ್ಷಣ ಇರುವವರು ಟೆಸ್ಟ್ ಮಾಡಿಸಿಕೊಳ್ಳಿ. 60ವರ್ಷ ಮೇಲ್ಪಟ್ಟ ವೃದ್ದರು ಹಾಗೂ ಮಕ್ಕಳು ಅನಾವಶ್ಯಕ ಓಡಾಡುವುದನ್ನು ನಿಲ್ಲಿಸಿ ಎಂದು ಗ್ರಾಮೀಣ ಭಾಗದ ಜನತೆಗೆ ಜಿ.ಪಂ ಸಿಇಓ ಬಿ.ಭಾರತಿ ಮನವಿ ಮಾಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: