ದೇಶ

ಸಾಮೂಹಿಕ ಅತ್ಯಾಚಾರ: ಬಾಲಕಿ ಆತ್ಮಹತ್ಯೆ

ಚಿತ್ರಕೂಟ,ಅ.14-ಸಾಮೂಹಿಕ ಅತ್ಯಾಚಾರಕ್ಕೀಡಾದ ದಲಿತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮಾಣಿಕ್ ಪುರ ಪ್ರದೇಶದಲ್ಲಿ ದುಷ್ಕರ್ಮಿಗಳಿಂದ ಅತ್ಯಾಚಾರಕ್ಕೊಳಗಾಗಿದ್ದ 15 ವರ್ಷದ ಬಾಲಕಿ ನಿನ್ನೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಚಿತ್ರಕೂಟ ಎಸ್ಪಿ ಅಂಕಿತ್ ಮಿತ್ತಲ್ ತಿಳಿಸಿದ್ದಾರೆ. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದ ಬಗ್ಗೆ ದೃಢಪಟ್ಟಿಲ್ಲ, ಮಾದರಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗುವುದು ಎಂದು ಹೇಳಿದ್ದಾರೆ.

ಬಾಲಕಿಯ ಸಾವಿನ ನಂತರ ಆಕೆಯ ಕುಟುಂಬಸ್ಥರು, ಕಳೆದ ಅಕ್ಟೋಬರ್ 8ರಂದು ಆಕೆಯ ಮೇಲೆ ಮೂವರು ಅತ್ಯಾಚಾರವೆಸಗಿದ್ದರು ಎಂದು ಹೇಳಿದ್ದಾರೆ. ಬಾಲಕಿಯ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಗ್ರಾಮದ ಮಾಜಿ ಮುಖ್ಯಸ್ಥನ ಪುತ್ರ ಕಿಶನ್ ಉಪಾಧ್ಯಾಯ ಮತ್ತು ಇತರ ಇಬ್ಬರಾದ ಆಶಿಶ್ ಮತ್ತು ಸತೀಶ್ ಎಂಬುವವರನ್ನು ಪೊಲೀಸರು ಬಂಧಿಸಿ ಕೇಸು ದಾಖಲಿಸಿದ್ದಾರೆ.

ಬಾಲಕಿ ನೀಡಿದ ದೂರನ್ನು ಪೊಲೀಸರು ಸ್ವೀಕರಿಸಿ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಳ್ಳದಿದ್ದ ಕಾರಣ ಬಾಲಕಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಬಸ್ಥರು ಆರೋಪಿಸಿದ್ದರೆ. ಪೊಲೀಸರು ಕುಟುಂಬಸ್ಥರು ಯಾವುದೇ ದೂರು ಅರ್ಜಿ ನೀಡಿರಲಿಲ್ಲ, ಹೀಗಾಗಿ ಎಫ್‌ಐಆರ್ ದಾಖಲಿಸಿಕೊಳ್ಳಲಿಲ್ಲ ಎಂದಿದ್ದಾರೆ. (ಏಜೆನ್ಸೀಸ್, ಎಂ.ಎನ್)

 

Leave a Reply

comments

Related Articles

error: