ಪ್ರಮುಖ ಸುದ್ದಿ

ರಾಜ್ಯದಲ್ಲಿ 9,265 ಮಂದಿಗೆ ಪಾಸಿಟಿವ್ ದೃಢ: 8,662 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ರಾಜ್ಯ( ಬೆಂಗಳೂರು)ಅ.15:- ರಾಜ್ಯದಲ್ಲಿ ಕೊರೋನಾ ವೈರಸ್ ಮಹಾಮಾರಿಯ ಅಬ್ಬರ ಮುಂದುವರೆದಿದ್ದು 9,265 ಮಂದಿಗೆ ಪಾಸಿಟಿವ್ ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 7,35,371ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 75 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10,198ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 4,574 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 2,93,405ಕ್ಕೆ ಏರಿಕೆಯಾಗಿದೆ. 27 ಮಂದಿ ಸಾವಿಗೀಡಾಗಿದ್ದು, ಸಾವಿನ ಸಂಖ್ಯೆ 3,417ಕ್ಕೆ ಏರಿಕೆಯಾಗಿದೆ.
8,662 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 6,11,167ಕ್ಕೆ ಏರಿಕೆಯಾಗಿದೆ. 1,13,987 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: