ಮೈಸೂರು

ಆರೋಗ್ಯ ಹಸ್ತ ಕಾರ್ಯಕ್ರಮಕ್ಕೆ ಚಾಲನೆ


ಮೈಸೂರು,ಅ.15:- ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಹಕಾರದೊಂದಿಗೆ ಆರೋಗ್ಯ ಹಸ್ತ ಕಾರ್ಯಕ್ರಮವನ್ನು ನಿಮ್ಮ ರಕ್ಷಣೆ ನಮ್ಮ ಗುರಿ ಎಂಬ ಧ್ಯೇಯ ವಾಕ್ಯದಡಿ ಚಾಮರಾಜ ವಿಧಾನ ಸಭಾ ಕ್ಷೇತ್ರದ ವಾರ್ಡ್ ನಂ.3 ರಲ್ಲಿ ವಾರ್ಡ್ ನಂ.3 ರ ಪಾಲಿಕೆ ಸದಸ್ಯ ಕೆ.ವಿ.ಶ್ರೀಧರ್ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.
ಇತರೆ ವಾರ್ಡ್ ಗಳ ಪಾಲಿಕೆ ಸದಸ್ಯರ ಸಹಯೋಗದಲ್ಲಿ ಕಾರ್ಯಕ್ರಮಕ್ಕೆ ಹೆಬ್ಬಾಳ್ ನ ಸೂರ್ಯ ಬೇಕರಿಯ ಚಾಮುಂಡೇಶ್ವರಿ ದೇವಾಲಯದ ಮುಂಭಾಗ ಮಾಜಿ ಸಂಸದ ಧೃವನಾರಾಯಣ್ ಚಾಲನೆ ನಿಡಿದರು. ಸಾರ್ವಜನಿಕರು ಬಂದು ಈ ಕಾರ್ಯಕ್ರಮದ ಸದುಪಯೋಗ ಪಡೆಯಲು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ವಾಸು, ಎಂಎಲ್ ಸಿ ಧರ್ಮಸೇನ, ಮಾಜಿ ನಗರ ಪಾಲಿಕೆ ಸದಸ್ಯ ಪ್ರಶಾಂತ್ ಗೌಡ,ಡಾ.ಭರತ್, ಸ್ಥಳೀಯ ಮುಖಂಡರು ಭಾಗಿಯಾಗಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: