ಪ್ರಮುಖ ಸುದ್ದಿಮೈಸೂರು

ಅ.25ರಿಂದ ಮಂಗಳೂರಿನಿಂದ ಮೈಸೂರಿಗೆ ವಿಮಾನ ಸೇವೆ

ಮೈಸೂರು,ಅ.16:- ಅಕ್ಟೋಬರ್ 25ರಿಂದ ಮಂಗಳೂರಿನಿಂದ ಮೈಸೂರಿಗೆ ವಿಮಾನ ಸೇವೆ ಪ್ರಾರಂಭಿಸಲು ಏರ್ ಇಂಡಿಯಾ ನಿರ್ಧರಿಸಿದೆ.

ಟ್ರಯಲ್ ರನ್ ನಂತರ ಕಾರ್ಯಸಾಧ್ಯತಾ ವರದಿಯನ್ನು ಆಧರಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈಗ ರಸ್ತೆ ಮತ್ತು ರೈಲು ಮೂಲಕ ಸಂಪರ್ಕ ಹೊಂದಿರುವ ಈ ಎರಡು ನಗರಗಳ ನಡುವೆ ವಿಮಾನ ಸೇವೆ ಪ್ರಾರಂಭಿಸುವಂತೆ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಮತ್ತು ಕೆಲವು ಕೈಗಾರಿಕೋದ್ಯಮಿಗಳು ವೈಮಾನಿಕ ಸಂಸ್ಥೆಗೆ ಮನವಿ ಮಾಡಿದ್ದರು.

ಏರ್ ಇಂಡಿಯಾ ಬೆಂಗಳೂರಿನಿಂದ ಮಂಗಳೂರಿಗೆ ಬೆಳಿಗ್ಗೆ 6.50 ಕ್ಕೆ ಬರುವ ವಿಮಾನವನ್ನೇ ಮೈಸೂರಿನ ಕಡೆ ತಿರುಗಿಸುವ ಸೂಚನೆ ಇದೆ. ಈ ವಿಮಾನ ಬೆಳಿಗ್ಗೆ 7.55 ಕ್ಕೆ ಮೈಸೂರಿನಿಂದ ಹೊರಟು ಬೆಳಿಗ್ಗೆ 8.50 ಕ್ಕೆ ಮಂಗಳೂರು ತಲುಪಲಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: