ಪ್ರಮುಖ ಸುದ್ದಿ

ರಾಜ್ಯದಲ್ಲಿ ಮುಂದುವರಿದ ಕೊರೊನಾ ಅಬ್ಬರ : 8,477 ಮಂದಿಗೆ ಪಾಸಿಟಿವ್ ದೃಡ

ರಾಜ್ಯ( ಬೆಂಗಳೂರು)ಅ.16:- ರಾಜ್ಯದಲ್ಲಿ ಕೊರೋನಾ ವೈರಸ್ ಮಹಾಮಾರಿಯ ಆಬ್ಬರ ಮುಂದುವರೆದಿದ್ದು ಗುರುವಾರ ಸಹ 8,477 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,43,848ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 85 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10,283ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3,788 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 2,97,193ಕ್ಕೆ ಏರಿಕೆಯಾಗಿದೆ. ನಗರದಲ್ಲಿ 45 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

8,841 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 6,20,008ಕ್ಕೆ ಏರಿಕೆಯಾಗಿದೆ. 1,13,538 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 939 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: