ದೇಶಪ್ರಮುಖ ಸುದ್ದಿ

ಬಸ್-ಪಿಕಪ್ ವಾಹನದ ನಡುವೆ ಅಪಘಾತ: 9 ಸಾವು; 24ಕ್ಕೂ ಹೆಚ್ಚು ಮಂದಿಗೆ ಗಾಯ

ಪಿಲಿಭಿಟ್,(ಉತ್ತರ ಪ್ರದೇಶ),ಅ.17- ಬಸ್ ಮತ್ತು ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸುಮಾರು 9 ಮಂದಿ ಮೃತಪಟ್ಟು, 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶ ರಾಜ್ಯದ ಪಿಲಿಭಿಟ್ ನಲ್ಲಿ ಇಂದು ಮುಂಜಾನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 730ರಲ್ಲಿ ಶನಿವಾರ ಮುಂಜಾನೆ ನಾಲ್ಕು ಗಂಟೆಯ ವೇಳೆಗೆ ಘಟನೆ ನಡೆದಿದೆ. ಲಖನೌನಲ್ಲಿನ ಕೇಸರಭಾಗ್​ ಡಿಪೋದ ಬಸ್,​​ ಪುರಾನಪುರ್ ಹೆದ್ದಾರಿಯಲ್ಲಿ ಹೋಗುವ ವೇಳೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 24ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಫಿಲಿಬಿಟ್​ನ ಪೊಲೀಸ್​ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಓರ್ವ ಮಹಿಳೆ ಸೇರಿದಂತೆ ಬಸ್ ನಲ್ಲಿದ್ದ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಪಿಕಪ್ ವಾಹನದಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಅಪಘಾತದ ಸಮಯದಲ್ಲಿ ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರು ಮತ್ತು ಬೊಲೆರೊದಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಪಿಕಪ್ ವಾಹನದ ಚಾಲಕ ನಿದ್ದೆ ಕಣ್ಣಿನಿಂದ ವಾಹನ ಚಲಾಯಿಸಿ ಬಸ್ ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. (ಏಜೆನ್ಸೀಸ್, ಎಂ.ಎನ್)

 

Leave a Reply

comments

Related Articles

error: