ಕರ್ನಾಟಕದೇಶಪ್ರಮುಖ ಸುದ್ದಿ

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ನಟ ವಿವೇಕ್ ಒಬೆರಾಯ್ ಪತ್ನಿಗೆ ಮತ್ತೆ ಸಿಸಿಬಿ ನೋಟಿಸ್

ಮುಂಬೈ/ಬೆಂಗಳೂರು,ಅ.17-ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಪತ್ನಿ ಹಾಗೂ ಪ್ರಕರಣದ ಆರೋಪಿ ಆದಿತ್ಯ ಆಳ್ವ ಸೋದರಿ ಪ್ರಿಯಾಂಕಾ ಆಳ್ವ ಒಬೆರಾಯ್ ಅವರಿಗೆ ಸಿಸಿಬಿ ಮತ್ತೊಮ್ಮೆ ನೋಟಿಸ್ ಜಾರಿ ಮಾಡಿದೆ.

ಇಂದು ಸಿಸಿಬಿ ಪ್ರಿಯಾಂಕಾ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ವಾಟ್ಸ್ ಆಪ್ ಮೂಲಕ ನೋಟಿಸ್ ಜಾರಿಗೊಳಿಸಿದ್ದಾರೆ ಎನ್ನಲಾಗಿದೆ.

ಮೊನ್ನೆಯೂ ಪ್ರಿಯಾಂಕಾಗೆ ಸಿಸಿಬಿ ನೋಟಿಸ್ ಜಾರಿ ಮಾಡಿತ್ತು. ಆದರೆ ಪ್ರಿಯಾಂಕಾ ಅವರು ನಿನ್ನೆ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಮತ್ತೆ ನೋಟಿಸ್ ಜಾರಿ ಮಾಡಲಾಗಿದೆ.

ಪ್ರಕರಣದ ಆರೋಪಿ, ಮಾಜಿ ಸಚಿವ ಜೀವರಾಜ್ ಆಳ್ವ ಪುತ್ರ ಆದಿತ್ಯ ಆಳ್ವ ತಲೆಮರೆಸಿಕೊಂಡಿದ್ದು, ಮುಂಬೈಯಲ್ಲಿರುವ ತನ್ನ ಸೋದರಿ ಪ್ರಿಯಾಂಕ ಆಳ್ವ ಒಬೆರಾಯ್ ಮನೆಯಲ್ಲಿ ಆಶ್ರಯ ಪಡೆದಿದ್ದಾನೆ ಎಂಬ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಅ.15 ರಂದು ವಿವೇಕ್ ಒಬೆರಾಯ್ ನಿವಾಸದ ಮೇಲೆ ದಾಳಿ ನಡೆಸಿದ್ದರು. (ಏಜೆನ್ಸೀಸ್, ಎಂ.ಎನ್)

 

Leave a Reply

comments

Related Articles

error: