ಕರ್ನಾಟಕಪ್ರಮುಖ ಸುದ್ದಿ

ವಿಜಯಪುರ: ಭೀಮಾ ನದಿಯ ಪ್ರವಾಹಕ್ಕೆ ಗ್ರಾಮಗಳು ಸಂಪೂರ್ಣ ಜಲಾವೃತ

ವಿಜಯಪುರ,ಅ.17-ಜಿಲ್ಲೆಯಲ್ಲಿ ಎರಡು ದಿನಗಳಿಂದ ಮಳೆಯಾಗದಿದ್ದರೂ ಪ್ರವಾಹ ಪ್ರಮಾಣ ಮಾತ್ರ ಕಡಿಮೆಯಾಗಿಲ್ಲ. ಮಹಾರಾಷ್ಟ್ರ ಡ್ಯಾಂಗಳಿಂದ ಬಿಟ್ಟ ಅಪಾರ ನೀರಿನಿಂದಾಗಿ ಭೀಮಾನದಿ ಪ್ರವಾಹ ಹೆಚ್ಚಾಗಿದೆ. ಪ್ರವಾಹಕ್ಕೆ ಸುತ್ತಮುತ್ತಲಿನ ಗ್ರಾಮಗಳು ಸಂಪೂರ್ಣ ಜಲಾವೃತವಾಗಿವೆ.

ಸಿಂದಗಿ ತಾಲೂಕಿನ ದೇವಣಗಾಂವ, ಕಡ್ಲೇವಾಡ, ಬ್ಯಾಡಗಿಹಾಳ, ಶಂಬೇವಾಡ, ಕುಮಸಗಿ, ಗ್ರಾಮವನ್ನು ಪ್ರವಾಹದ ನೀರು ಸುತ್ತುವರೆದಿದ್ದು, ದೇವಣಗಾಂವ ಗ್ರಾಮದ ಬಸ್ ನಿಲ್ದಾಣದಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಮುಳುಗಡೆಯಾಗಿದೆ.

ಬಸ್ ನಿಲ್ದಾಣದ ಸಮೀಪದ ಹನುಮಾನ ದೇವಸ್ಥಾನ, ಅಂಬಿಗರ ಚೌಡಯ್ಯ ವೃತ್ತ, ಬಸವೇಶ್ವರ ವೃತ್ತ, ಕನಕದಾಸ ವೃತ್ತ ನೀರಿನಿಂದ ಆವೃತವಾಗಿವೆ. ಗ್ರಾಮದ ಸುತ್ತಲೂ ನೀರು ಆವರಿಸಿದೆ. 300ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಮುಖ್ಯ ವ್ಯಾಪಾರ ಕೇಂದ್ರ ಆಗಿರುವ ಬಸ್ ನಿಲ್ದಾಣ ಬಸವೇಶ್ವರ ವೃತ್ತದಲ್ಲಿ ಅಂಗಡಿ, ಹೊಟೇಲ್ ಗಳಲ್ಲಿ ನೀರು ಏಕಾಏಕಿ ನುಗ್ಗಿದ ಪರಿಣಾಮ ಹೊಕ್ಕಿರುವದರಿಂದ ವ್ಯಾಪಾರಿಗಳು ಪರದಾಡುತ್ತಿದ್ದಾರೆ.

ಕಳೆದ ಕೆಲವು ದಿನಗಳಿಂದ ಬಿದ್ದ ಮಳೆಯಿಂದಾಗಿ ವಿಜಯಪುರದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ನದಿ ನಡುಗಡ್ಡೆಯಲ್ಲಿ ಸಿಲುಕಿದ್ದ ಏಳು ಮಂದಿಯನ್ನು ಜಿಲ್ಲಾಡಳಿತದ ಅಧಿಕಾರಿಗಳು ರಕ್ಷಣೆ ಮಾಡಿದ್ದರು. ಅದೇ ರೀತಿ ಪ್ರವಾಹದಿಂದಾಗಿ ಮರವೇರಿ ಕುಳಿತಿದ್ದ 110 ವರ್ಷದ ಅಜ್ಜಿಯನ್ನು ರಕ್ಷಣೆ ಮಾಡಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಸಾವಿವಾರು ಎಕರೆ ಪ್ರದೇಶ ಜಲಾವೃತಗೊಂಡಿದ್ದು, ಲಕ್ಷಾಂತರ ರೂ. ಮೌಲ್ಯದ ಬೆಳೆ ನಷ್ಟವಾಗಿದೆ. ಸಾವಿರಾರು ಮನೆಗಳು ಕೂಡ ಕುಸಿದು ಬಿದ್ದಿವೆ. (ಎಂ.ಎನ್)

Leave a Reply

comments

Related Articles

error: