ಪ್ರಮುಖ ಸುದ್ದಿಮೈಸೂರು

ದೀಪಗಳ ನಡುವೆ ಕಂಗೊಳಿಸುತ್ತಿರುವ ಮೈಸೂರು

ಮೈಸೂರು,ಅ.17:- ಸಯ್ಯಾಜಿರಾವ್ ರಸ್ತೆಯಲ್ಲಿ ಇರುವ “ಹಸಿರು ಮಂಟಪ”ವನ್ನು ದೀಪ ಬೆಳಗಿಸುವುದರ ಮುಖಾಂತರ ದಸರಾ ದೀಪಾಲಂಕಾರವನ್ನು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಇಂದು ಸಂಜೆ ಉದ್ಘಾಟಿಸಿದರು.
ಈ ಮೂಲಕ ಮೈಸೂರು ನಗರದ ಪ್ರಮುಖ ಬೀದಿಗಳು ಬೆಳಕಿನೊಂದಿಗೆ ಕಂಗೊಳಿಸಿತು.
ಈ ಸಂದರ್ಭದಲ್ಲಿ ವಿಧಾನ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಎಸ್.ಎ.ರಾಮದಾಸ್, ಮುಡಾ ಅಧ್ಯಕ್ಷರಾದ ಎಚ್.ವಿ.ರಾಜೀವ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಕಳೆದ ಬಾರಿ ನೂರಾರು ಕಿ.ಮೀ. ವ್ಯಾಪ್ತಿಯಲ್ಲಿ ದೀಪಗಳು ಬೆಳಗುತ್ತಿದ್ದವು. ಆದರೆ ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರಳ ದಸರಾ ಆಚರಣೆ ಮಾಡುತ್ತಿರುವುದರಿಂದ 50 ಕಿ ಮೀ ಗೆ ಸೀಮಿತಗೊಳಿಸಿದ್ದೇವೆ. ಮುಖ್ಯಮಂತ್ರಿಗಳಿಗೆ ಸಹ ಶುಕ್ರವಾರ 5 -6 ಕಿ.ಮೀ. ನಷ್ಟು ದೂರದ ದೀಪಾಲಂಕಾರವನ್ನು ತೋರಿಸಿ ಪುನಃ ಒಪ್ಪಿಗೆ ಪಡೆಯಲಾಗಿದೆ ಎಂದು ಸಚಿವರು ತಿಳಿಸಿದರು.
ಈ ದೀಪಾಲಂಕಾರವು ದಸರಾ ಮುಗಿಯುವವರೆಗೆ ಪ್ರತಿದಿನ ಸಂಜೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಇರುತ್ತದೆ ಎಂದು ಸಚಿವರಾದ ಎಸ್.ಟಿ.ಸೋಮಶೇಖರ್ ಮಾಹಿತಿ ನೀಡಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: