
ಪ್ರಮುಖ ಸುದ್ದಿ
ರಾಜ್ಯದಲ್ಲಿ ಮುಂದುವರಿದ ಕೊರೋನಾ ಮಹಾಮಾರಿಯ ಅಬ್ಬರ : 7,012 ಮಂದಿಗೆ ಪಾಸಿಟಿವ್ ದೃಢ
ರಾಜ್ಯ(ಬೆಂಗಳೂರು)ಅ.19:- ರಾಜ್ಯದಲ್ಲಿ ಕೊರೋನಾ ವೈರಸ್ ಮಹಾಮಾರಿಯ ಅಬ್ಬರ ಮುಂದುವರೆದಿದ್ದು 7,012 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,65,586ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 51 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10,478ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಬೆಂಗಳೂರು ನಗರವೊಂದರಲ್ಲೇ ಅತಿ ಹೆಚ್ಚು ಅಂದರೆ 3,535 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,07,540ಕ್ಕೆ ಏರಿಕೆಯಾಗಿದೆ. ನಗರದಲ್ಲಿ 25 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.
8,344 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 6,45,825ಕ್ಕೆ ಏರಿಕೆಯಾಗಿದೆ. 1,09,264 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 945 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. (ಕೆ.ಎಸ್,ಎಸ್.ಎಚ್)