ಪ್ರಮುಖ ಸುದ್ದಿ

ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿದ ಸಿಎಂ ಬಿಎಸ್ ವೈ

ರಾಜ್ಯ(ಶಿವಮೊಗ್ಗ)ಅ.20:- ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಸಿಎಂ ಯಡಿಯೂರಪ್ಪ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿದ್ದಾರೆ.
ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ರೈತರ ಹೊಲಗಳಿಗೆ ನೀರನ್ನು ಹರಿಸುವ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುತ್ತಿದೆ. ಅದೇ ರೀತಿ ಶಿವಮೊಗ್ಗ ಜಿಲ್ಲೆಯಲ್ಲೂ ಸಾಕಷ್ಟು ಏತ ನೀರಾವರಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದೆ. ನೀರಾವರಿ ಯೋಜನೆಗಳಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಕಲ್ಲೊಡ್ಡು ಏತ ನೀರಾವರಿ ಯೋಜನೆಯಿಂದಾಗಿ ಶಿಕಾರಿಪುರ ಹಾಗೂ ಸೊರಬ ತಾಲೂಕುಗಳ 3,430 ಹೆಕ್ಟೇರ್ ಪ್ರದೇಶಗಳಿಗೆ ನೀರಾವರಿ ಸಾಧ್ಯವಾಗಲಿದೆ. ಯೋಜನೆಯಿಂದ 41 ಕೆರೆಗಳಿಗೆ ಸಹ ನೀರು ತುಂಬಿಸಲಾಗುತ್ತಿದೆ. ತಾಳಗುಂದ ಹೊಸೂರು ಏತ ನೀರಾವರಿ ಯೋಜನೆ ಈಗಾಗಲೇ ಅನುಷ್ಟಾನಗೊಳ್ಳುತ್ತಿದ್ದು, ಇದರಿಂದ 230 ಕೆರೆಗಳಿಗೆ ನೀರು ತುಂಬಿಸಲು ಸಾಧ್ಯವಾಗಲಿದೆ. ಮುಂದಿನ ವರ್ಷ ಈ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದಿದ್ದಾರೆ.
ಅಕ್ಕಮಹಾದೇವಿ ಅವರ ಜನ್ಮಸ್ಥಳವಾದ ಉಡುತಡಿಯನ್ನು ಪುಣ್ಯಕ್ಷೇತ್ರ ಹಾಗೂ ಪ್ರವಾಸಿ ತಾಣವಾಗಿ ಸಮಗ್ರವಾಗಿ ಅಭಿವೃದ್ಧಿ ಪಡಿಸಲು ನಾವು ಬದ್ಧರಾಗಿದ್ದು ಈಗಾಗಲೇ ಕಾಮಗಾರಿ ಆರಂಭವಾಗಿದೆ. ಉತ್ತರ ಕರ್ನಾಟಕದ ಅತಿವೃಷ್ಟಿ ತಾಲೂಕುಗಳ ವೈಮಾನಿಕ ಸಮೀಕ್ಷೆಯನ್ನು 21 ರಂದು ನಡೆಸಲಿದ್ದೇನೆ. ಪ್ರಧಾನಮಂತ್ರಿ ಅವರು ನೆರೆಪೀಡಿತ ಪ್ರದೇಶಗಳಿಗೆ ಎಲ್ಲಾ ನೆರವು ನೀಡುವ ಭರವಸೆಯನ್ನು ನೀಡಿದ್ದಾರೆ. ಈಗಾಗಲೇ ಪ್ರವಾಹ ಪೀಡಿತ ಪ್ರದೇಶದಗಲ್ಲಿ ಪರಿಹಾರ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: