ಮೈಸೂರು

ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಡಾ.ಪಿ.ಅಮರನಾಥ್

ಮೈಸೂರು, ಅ.20:- ಮೈಸೂರು ಜಿಲ್ಲೆಯಲ್ಲಿ ಕೊರೋನಾ ಸೋಂಕು ನಿಯಂತ್ರಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಿ.ಅಮರನಾಥ್ ತಿಳಿಸಿದರು.
ಮೈಸೂರಿಗೆ ಆಗಮಿಸಿರುವ ಅವರು ಈಗಾಗಲೇ ಅಧಿಕಾರ ವಹಿಸಿಕೊಂಡಿದ್ದು, ಜಿಲ್ಲೆಯಲ್ಲಿ ಕೋವಿಡ್-19 ಪ್ರಮಾಣ ಹೆಚ್ಚಿದೆ ಎಂಬ ವರದಿಯನ್ನು ನನಗೆ ಈಗಾಗಲೇ ನೀಡಿದ್ದಾರೆ. ಜನರಲ್ಲಿ ಜಾಗೃತಿ ವಹಿಸಲು ಇನ್ನಷ್ಟು ಕ್ರಮ ವಹಿಸಬೇಕಿದೆ. ಅದೇ ರೀತಿ ಕೋವಿಡ್-19 ಪರೀಕ್ಷೆ ಹೆಚ್ಚಿಸಿ ಸೋಂಕನ್ನು ಆರಂಭದಲ್ಲೇ ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಸಾವಿನ ಪ್ರಮಾಣವನ್ನು ಕಡಿಮೆ ಮಾಡುವ ಗುರಿ ಹೊಂದಿರುವುದಾಗಿ ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: