ಮೈಸೂರು

ಕೋವಿಡ್-19 ನಿಯಂತ್ರಣಕ್ಕಾಗಿ ನಗರದ ವಿವಿಧ 22 ಸ್ಥಳಗಳಲ್ಲಿ ಕೋವಿಡ್ ಪರೀಕ್ಷೆ

ಮೈಸೂರು,ಅ.20:-ಕೋವಿಡ್-19 ನಿಯಂತ್ರಣ ಸಲುವಾಗಿ ಮೈಸೂರು ನಗರದ ವಿವಿಧ 22 ಸ್ಥಳಗಳಲ್ಲಿ ಪಾಲಿಕೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.
ನಾಡಹಬ್ಬ ದಸರಾ ಸಂದರ್ಭದಲ್ಲಿ ನಗರಕ್ಕೆ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಿರುವುದರಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ಪಾಲಿಕೆ ವತಿಯಿಂದ ಮೊಬೈಲ್ ತಂಡಗಳನ್ನು ಸಹ ರಚಿಸಲಾಗಿದ್ದು ಸಾರ್ವಜನಿಕರು ಇದರ ಉಪಯೋಗ ಪಡೆದುಕೊಂಡು ಉಚಿತವಾಗಿ ಕೋವಿಡ್ ಪರೀಕ್ಷೆಗಳನ್ನು ಮಾಡಿಸಿಕೊಳ್ಳಲು ತಿಳಿಸಲಾಗಿದೆ.
ನಗರದ ವಿವಿಧ ಫ್ಯಾಕ್ಟರಿಗಳು, ವಾಣಿಜ್ಯ, ಕೈಗಾರಿಕಾ ಉದ್ಯಮಗಳು, ಶಾಲಾ ಕಾಲೇಜು ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಸರ್ಕಾರೇತರ ಸಂಸ್ಥೆಗಳು ತಮ್ಮ ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಇಚ್ಛಿಸಿದ್ದಲ್ಲಿ ಕೂಡಲೇ ನಗರಪಾಲಿಕೆಯ ಕಂಟ್ರೋಲ್ ರೂಂ.ದೂರವಾಣಿ ಸಂಖ್ಯೆ 9449841196 ಹಾಗೂ 0821-2440890 ಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಂಡಲ್ಲಿ ನಮ್ಮ ಮೊಬೈಲ್ ತಂಡ ನಿಮ್ಮ ಸ್ಥಳಕ್ಕೆ ಭೇಟಿ ನೀಡಿ ಉಚಿತವಾಗಿ ಕೋವಿಡ್ ಪರೀಕ್ಷೆ ಮಾಡಲಿದೆ ಎಂದು ಪಾಲಿಕೆಯ ಆಯುಕ್ತ ಗುರುದತ್ ಹೆಗಡೆ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: