ಮೈಸೂರು

ಮನೆಯ ಬೀಗ ಮುರಿದು ಕಳ್ಳತನ : 80ಸಾವಿರ ರೂ. ಮೌಲ್ಯದ ಪದಾರ್ಥ ಕಳುವು

ಮನೆಯ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ ಸುಮಾರು 80ಸಾವಿರ ರೂ.ಮೌಲ್ಯದ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಕದ್ದೊಯ್ದ ಘಟನೆ ಹೂಟಗಳ್ಳಿಯಲ್ಲಿ ನಡೆದಿದೆ.

ಹೂಟಗಳ್ಳಿಯ ನಿವಾಸಿ ಸುದಾಬಿದ್ದಪ್ಪ  ಎಂಬವರು ಮಾ.31ರಂದು ಮನೆಗೆ ಬೀಗ ಹಾಕಿಕೊಂಡು ಸಂಬಂಧಿಕರ ಮನೆಗೆ ತೆರಳಿದ್ದರು.  ಏ.6ರಂದು ಮನೆಗೆ ಮರಳಿದಾಗ ಮನೆಯ ಬಾಗಿಲು ತೆರೆದಿರುವುದು ಗಮನಕ್ಕೆ ಬಂದಿದೆ. ಪರಿಶೀಲಿಸಲಾಗಿ ಕಳ್ಳತನವಾಗಿರುವುದು ತಿಳಿದುಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಮನೆಯ ವಸ್ತುಗಳನ್ನು ಚೆಲ್ಲಾಪಿಲ್ಲಿಗೊಳಿಸಿದ್ದಾರಲ್ಲದೇ ಮನೆಯಲ್ಲಿದ್ದ 55 ಇಂಚಿನ ಎಲ್ಇಡಿ ಟಿವಿ, ಕೊಡವ ಕತ್ತಿ ಹಾಗೂ ಪೇಟಾ, ಡ್ರೆಸ್  ಸೇರಿದಂತೆ ಕಂಪೌಂಡ್ ಒಳಗೆ ನಿಲ್ಲಿಸಿದ್ದ ಹೋಂಡಾ ಆ್ಯಕ್ಟೀವಾ ಸ್ಕೂಟರನ್ನು ಕಳುವು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ವಿಜಯನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: