ದೇಶಪ್ರಮುಖ ಸುದ್ದಿ

ಬಾಂಗ್ಲಾ ನಿರಾಶ್ರಿತರಿಗೆ ನಾಗರಿಕ ಸೌಲಭ್ಯ ನೀಡುವ ಕುರಿತು ನಿರ್ಧರಿಸಲಿರುವ ಸಾಂವಿಧಾನಿಕ ಪೀಠ

ನವದೆಹಲಿ : ಬಾಂಗ್ಲಾದೇಶದಿಂದ ವಿವಿಧ ಕಾರಣಕ್ಕಾಗಿ ಭಾರತಕ್ಕೆ ಬಂದು ನೆಲೆಸಿರುವ ಅಲ್ಪಸಂಖ್ಯಾತರ ಸ್ಥಾನಮಾನಗಳ ಕುರಿತು ಸರ್ವೋಚ್ಚ ನ್ಯಾಯಾಲಯದ ಸಾಂವಿಧಾನಿಕ ಪೀಠ ವಿಚಾರಣೆ ನಡೆಸಲಿದೆ.

ಅಸ್ಸಾಂ, ಪಶ್ಚಿಮ ಬಂಗಾಳ, ಮೇಘಾಲಯ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಅಲ್ಪಸಂಖ್ಯಾತರನ್ನು ವಾಪಸ್ ಕಳಿಸಬಾರದೆಂದು ಕೇಂದ್ರ ಹಾಗೂ ಅಸ್ಸಾಂ ಸರ್ಕಾರಗಳಿಗೆ ನಿರ್ದೇಶನ ನೀಡಬೇಕೆಂದು ಎನ್‍ಜಿಒ ಸ್ವಜನ್, ಬಿಮಾಲಂಗ್ಷು ರಾಯ್ ಫೌಂಡೇಷನ್ ಅರ್ಜಿ ಸಲ್ಲಿಸಿದ್ದರು.

ಭಾರತದಲ್ಲಿ ಹುಟ್ಟಿರುವ ಬಾಂಗ್ಲಾದೇಶದ ಅಲ್ಪಸಂಖ್ಯಾತರ ಭಾರತೀಯ ಮಕ್ಕಳು ಕಾನೂನು ವ್ಯಾಪ್ತಿಯಲ್ಲಿ ದೇಶದ ನಾಗರಿಕ ಸೌಲಭ್ಯಗಳನ್ನು ಪಡೆಯಬಹುದೇ ಎಂಬ ವಿಚಾರದ ಬಗ್ಗೆ ಸಾಂವಿಧಾನಿಕ ಪೀಠವೇ ತೀರ್ಪು ನೀಡಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಅರ್ಜಿಯ ವಿಚಾರಣೆಯನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಜಗದೀಶ್ ಸಿಂಗ್ ಖೇಹರ್ ಹಾಗೂ ನ್ಯಾ. ಡಿ.ವೈ. ಚಂದ್ರಚೂಡ್ ಅವರಿದ್ದ ಸುಪ್ರೀಂ ಕೋರ್ಟ್ ನ ನ್ಯಾಯಪೀಠ ಅರ್ಜಿಯ ವಿಚಾರಣೆಯನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡಿದೆ.  ಮೇ.11 ರಂದು ಅರ್ಜಿಯ ವಿಚಾರಣೆ ನಡೆಯಲಿದೆ.

(ಎನ್‍.ಬಿ.ಎನ್‍)

Leave a Reply

comments

Related Articles

error: