ಕರ್ನಾಟಕಪ್ರಮುಖ ಸುದ್ದಿ

ಶಿವಕುಮಾರ ಸ್ವಾಮೀಜಿಗೆ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ

ಬೆಂಗಳೂರು : 110ನೇ ವಸಂತಕ್ಕೆ ಕಾಲಿಟ್ಟಿರುವ ಡಾ. ಶಿವಕುಮಾರ ಸ್ವಾಮೀಜಿಯವರಿಗೆ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.

ಗ್ರಾಮೀಣ ಮಕ್ಕಳಿಗೆ ವಿಶೇಷ ಆದ್ಯತೆ ನೀಡಿ ಅವರ ಬದುಕನ್ನು ರೂಪಿಸುವಲ್ಲಿ ಶ್ರೀಗಳು ಮಾಡಿದ ಕೆಲಸ ಅಸಮಾನ್ಯವಾದದ್ದು. ಅವರ ಸೇವೆಯನ್ನು ಪರಿಗಣಿಸಿ ಮಹಾವೀರ ಶಾಂತಿ ಪ್ರಶಸ್ತಿಗೆ ಡಾ. ಶಿವಕುಮಾರ ಸ್ವಾಮೀಜಿಯವರನ್ನು ಆಯ್ಕೆ ಮಾಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಇದೇ ಮೊದಲ ಬಾರಿಗೆ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ ನೀಡಲಾಗುತ್ತಿದ್ದು, ಏಪ್ರಿಲ್ 9 ರಂದು ನಡೆಯಲಿರುವ ಮಹಾವೀರ ಜಯಂತಿ ಸಂದರ್ಭ ಶ್ರೀಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಡಾ.ಮಲ್ಲಿಕಾ ಘಂಟಿ ಅವರಿಗೆ ಅಕ್ಕ ಮಹಾದೇವಿ ಪ್ರಶಸ್ತಿ :

ಮಹಿಳಾ ಪರವಾದ ಹೋರಾಟಗಳ ಮುಂಚೂಣಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಮಲ್ಲಿಕಾ ಘಂಟಿ ಅವರನ್ನು 2016ನೇ ಸಾಲಿನ ಅಕ್ಕಮಹಾದೇವಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯನ್ನು ಏಪ್ರಿಲ್ 11 ರಂದು ನಡೆಯಲಿರುವ ಅಕ್ಕಮಹಾದೇವಿ ಜಯಂತಿ ಸಂದರ್ಭ ಪ್ರದಾನ ಮಾಡಲಾಗುವುದು. ಈ ಎರಡೂ ಪ್ರಶಸ್ತಿಗಳನ್ನು ಮೊದಲ ಬಾರಿಗೆ ನೀಡಲಾಗುತ್ತಿದ್ದು, ಎರಡೂ ಪ್ರಶಸ್ತಿಗಳು ತಲಾ 3 ಲಕ್ಷ ರು ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.

(ಎನ್‍.ಬಿ.ಎನ್‍)

Leave a Reply

comments

Related Articles

error: