ಮೈಸೂರು

ಕ್ಯಾಂಟರ್ ಬೈಕ್ ಮುಖಾಮುಖಿ : ಓರ್ವ ಸಾವು

ಕ್ಯಾಂಟರ್ ಹಾಗೂ ಬೈಕ್  ಪರಸ್ಪರ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭಿರ ಗಾಯಗೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆ  ಮಳವಳ್ಳಿ ತಾಲೂಕಿನ ಅಣ್ಣೇಕೊಪ್ಪಲು ಗೇಟ್ ಬಳಿ ಕೊಳ್ಳೇಗಾಲದಿಂದ ಮುತ್ತತ್ತಿಗೆ ಹೋಗುತ್ತಿದ್ದ ಕ್ಯಾಂಟರ್ ಹಾಗೂ ಮಳವಳ್ಳಿಯಿಂದ ಕೊಳ್ಳೇಗಾಲ ಕಡೆಗೆ ಹೋಗುತ್ತಿದ್ದ ಬೈಕ್  ನಡುವೆ ಅಪಘಾತ ಸಂಭವಿಸಿ ಈ ದುರ್ಘಟನೆ ನಡೆದಿದೆ.
ಮಳವಳ್ಳಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಹೆಚ್ಚಿನ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.   (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: