ಕರ್ನಾಟಕಪ್ರಮುಖ ಸುದ್ದಿ

ಬಂಡಾಯ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಬಿಜೆಪಿಯಿಂದ ಉಚ್ಛಾಟನೆ

ಬೆಂಗಳೂರು,ಅ.24-ಪಕ್ಷದ ಸೂಚನೆ ಕಡೆಗಣಿಸಿ, ಪಕ್ಷದ ವಿರುದ್ಧ ಬಂಡಾಯವೆದ್ದು, ವಿಧಾನಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಡಿ.ಟಿ.ಶ್ರೀನಿವಾಸ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆದೇಶದ ಮೇರೆಗೆ, ಡಿ.ಟಿ.ಶ್ರೀನಿವಾಸ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ.

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಶ್ರೀನಿವಾಸ್ ಅವರು ಕಣದಿಂದ ಹಿಂದಕ್ಕೆ ಸರಿಯುವಂತೆ ತಿಳಿಸಿದ್ದರೂ ಪಕ್ಷದ ಸೂಚನೆ ಕಡೆಗಣಿಸಿ, ಮುಜುಗರಕ್ಕೆ ಕಾರಣರಾಗಿದ್ದಾರೆ. ಆದ್ದರಿಂದ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ ಎಂಬುದಾಗಿ ತಿಳಿಸಲಾಗಿದೆ. (ಎಂ.ಎನ್)

 

 

 

 

Leave a Reply

comments

Related Articles

error: