ದೇಶಪ್ರಮುಖ ಸುದ್ದಿ

`ಕಿಸಾನ್ ಸೂರ್ಯೋದಯ ಯೋಜನೆ’ ಸೇರಿದಂತೆ ಮೂರು ಯೋಜನೆ ಉದ್ಘಾಟಿಸಿದ ಪ್ರಧಾನಿ ಮೋದಿ

ಅಹಮದಾಬಾದ್,ಅ.24-‘ಕಿಸಾನ್ ಸೂರ್ಯೋದಯ ಯೋಜನೆ’ ಸೇರಿದಂತೆ ಗುಜರಾತ್‌ನಲ್ಲಿನ ಮೂರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.

ರೈತರಿಗೆ ನೀರಾವರಿಗಾಗಿ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಕೆ ಮಾಡುವುದಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಇತ್ತೀಚೆಗೆ ಕಿಸಾನ್ ಸೂರ್ಯೋದಯ ಯೋಜನೆ’ ಘೋಷಿಸಿದ್ದರು. ಈ ಯೋಜನೆಯಡಿ ಬೆಳಿಗ್ಗೆ 5ರಿಂದ ರಾತ್ರಿ 9ರ ವರೆಗೆ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಇದಕ್ಕಾಗಿ ಬಜೆಟ್‌ನಲ್ಲಿ 3,500 ರೂ. ಘೋಷಿಸಲಾಗಿತ್ತು. 2023ರ ಒಳಗೆ ಟ್ರಾನ್ಸ್‌ಮಿಷನ್ ಮೂಲಸೌಕರ್ಯ ಒದಗಿಸುವ ಗುರಿ ಹೊಂದಲಾಗಿದೆ.

ಯುಎನ್ ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್‌ ಕಾರ್ಡಿಯಾಲಜಿ ಆಯಂಡ್ ರಿಸರ್ಚ್‌ನ ಪೀಡಿಯಾಟ್ರಿಕ್ ಹಾರ್ಟ್ ಆಸ್ಪತ್ರೆಯನ್ನೂ ಮೋದಿ ಉದ್ಘಾಟಿಸಿದ್ದಾರೆ. ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ಟೆಲಿ-ಕಾರ್ಡಿಯಾಲಜಿಗಾಗಿ ಅಭಿವೃದ್ಧಿಪಡಿಸಿದ ಮೊಬೈಲ್ ಆಯಪ್‌ ಅನ್ನು ಉದ್ಘಾಟನೆ ಮಾಡಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಇತರ ಸಚಿವರು ವಿಡಿಯೊ ಕಾನ್ಫರೆನ್ಸ್ ಮೂಲಕ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. (ಏಜೆನ್ಸೀಸ್, ಎಂ.ಎನ್)

 

 

 

 

Leave a Reply

comments

Related Articles

error: