ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ ಮುಂದಿನ 24 ಗಂಟೆ ಭಾರಿ ಮಳೆ

ಬೆಂಗಳೂರು,ಅ.24-ರಾಜ್ಯದಲ್ಲಿ ಮುಂದಿನ 24 ಗಂಟೆ ಭಾರಿ ಮಳೆಯಾಗಲಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಅ.25ರಂದು ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಬೆಚ್ಚಿ ಬಿದ್ದಿರುವ ಬೆಂಗಳೂರಿನಲ್ಲಿ ಮುಂದಿನ 48 ಗಂಟೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಒಂದು ವಾರದಲ್ಲಿ ಬೆಂಗಳೂರು ನಗರದಲ್ಲಿ ಅಧಿಕ ಮಳೆಯಾಗಿದೆ. ವಾಡಿಕೆಯಂತೆ 32 ಮಿಮೀ ಮಳೆಯಾಗಬೇಕಿತ್ತು. 102 ಮಿಮೀ ಮಳೆಯಾಗಿದ್ದು, ಶೇ.223 ಹೆಚ್ಚು ಮಳೆ ಸುರಿದಿದೆ. ಜೂ.1ರಿಂದ ಸೆ.30ರವರೆಗೆ ಬೆಂಗಳೂರಿನಲ್ಲಿ 369 ಮಿಮೀ ಮಳೆಯಾಗಬೇಕಿತ್ತು. ಆದರೆ, 514 ಮಿಮೀ ಮಳೆ ಸುರಿದಿದ್ದು, ಶೇ.23 ಹೆಚ್ಚು ಮಳೆಯಾಗಿದೆ. (ಎಂ.ಎನ್)

Leave a Reply

comments

Related Articles

error: