ದೇಶಪ್ರಮುಖ ಸುದ್ದಿ

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಡಿಸೆಂಬರ್ 31 ಕಡೆ ದಿನ

ನವದೆಹಲಿ,ಅ.24-2019-20ನೇ ಸಾಲಿಗೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ನೀಡಲಾಗಿದ್ದ ಗಡುವನ್ನು ಡಿಸೆಂಬರ್ 31ರವರೆಗೂ ಕೇಂದ್ರ ಸರ್ಕಾರ ವಿಸ್ತರಿಸಿದೆ.

ಈ ಹಿಂದೆ 2019-20ನೇ ಸಾಲಿನ ರಿಟರ್ನ್ಸ್ ಸಲ್ಲಿಸಲು ನವೆಂಬರ್ 30 ಕಡೇ ದಿನ ಎಂದು ಆದಾಯ ತೆರಿಗೆ ಇಲಾಖೆ ಘೋಷಿಸಿತ್ತು.

ಕೋವಿಡ್- 19 ಸಾಂಕ್ರಾಮಿಕ ರೋಗದಿಂದಾಗಿ ತೆರಿಗೆದಾರರು ಎದುರಿಸುತ್ತಿರುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಆದಾಯ ತೆರಿಗೆ ಇಲಾಖೆಯ ಉನ್ನತ ನೀತಿ ನಿರೂಪಣಾ ಸಂಸ್ಥೆಯಾದ ಕೇಂದ್ರೀಯ ನೇರ ತೆರಿಗೆ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. (ಏಜೆನ್ಸೀಸ್, ಎಂ.ಎನ್)

 

Leave a Reply

comments

Related Articles

error: