ಪ್ರಮುಖ ಸುದ್ದಿಮೈಸೂರು

ಡಾ.ಬಿ.ಆರ್. ಅಂಬೇಡ್ಕರ್ ಭವನದ ಕಾಮಗಾರಿ ವೀಕ್ಷಿಸಿದ ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು,ಅ.25:- ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ದೇವರಾಜ ಮೊಹಲ್ಲಾದಲ್ಲಿ ನಿರ್ಮಾಣ ಹಂತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಬಳಿಕ ಮಾತನಾಡಿದ ಅವರು, ಅನೇಕ ವರ್ಷಗಳಿಂದ ಡಾ.ಅಂಬೇಡ್ಕರ್ ಭವನದ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ನಿಗದಿತ ವೇಳೆಗೆ ಕಾಮಗಾರಿ ಪೂರ್ಣವಾಗಿಲ್ಲ ಎಂಬ ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದೇನೆ ಎಂದರು.

ಭವನದ ಕಾಮಗಾರಿ ವಿಳಂಬಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿ ಸಭೆ ಕರೆದು ಮಾಹಿತಿ ಪಡೆದು, ಕಾಮಗಾರಿ ನಡೆಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಎಲ್.ನಾಗೇಂದ್ರ, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಮಹಾನಗರ ಪಾಲಿಕೆ ಆಯಕ್ತ ಗುರುದತ್ ಹೆಗಡೆ, ಮುಡಾ ಆಯುಕ್ತ ಡಾ.ಡಿ.ಬಿ.ನಟೇಶ್, ಮುಡಾ ಅಧೀಕ್ಷಕ ಇಂಜಿನಿಯರ್ ಶಂಕರ್ ಇನ್ನಿತರರು ಹಾಜರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: