ಪ್ರಮುಖ ಸುದ್ದಿಮೈಸೂರು

ಅರಮನೆಗೆ ಚಿತ್ತೈಸಿದ ತಾಯಿ ಚಾಮುಂಡೇಶ್ವರಿ ಉತ್ಸವಮೂರ್ತಿ

ಮೈಸೂರು,ಅ.26:- ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವೆ ಚಾಮುಂಡಿಬೆಟ್ಟದಿಂದ ಅಂಬವಿಲಾಸ ಅರಮನೆಗೆ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ತರಲಾಗಿದೆ.
ಜಯಮಾರ್ತಾಂಡ ದ್ವಾರದ ಮೂಲಕ ಪೊಲೀಸ್ ಬಿಗಿ ಭದ್ರತೆಯಲ್ಲಿ ಅರಮನೆಗೆ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿ ಪ್ರವೇಶಿಸಿದ್ದು, ತಾಯಿ ಚಾಮುಂಡೇಶ್ವರಿ ಇಂದು ಜಂಬೂ ಸವಾರಿಯಲ್ಲಿ ಕ್ಯಾಪ್ಟನ್ ಅಭಿಮನ್ಯು ಹೊರಲಿರುವ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿ ಕಂಗೊಳಿಸಲಿದ್ದಾಳೆ. ತಾಯಿ ಚಾಮುಂಡೇಶ್ವರಿ ಉತ್ಸವಮೂರ್ತಿ ತರುವ ವೇಳೆ ರಸ್ತೆಯ ಇಕ್ಕೆಲಗಳಲ್ಲಿ ಜನ ಕಿಕ್ಕಿರಿದು ನಿಂತು ಕಣ್ತುಂಬಿಕೊಂಡರು.
ತೆರೆದ ವಾಹನದಲ್ಲಿ ಉತ್ಸವಮೂರ್ತಿಯನ್ನು ಕರೆತರಲಾಗಿದ್ದು ಅರಮನೆಯಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: